ಪಶ್ಚಿಮ ಬಂಗಾಳ ಸಿಎಂ ಮಮತಾ ವಿರುದ್ಧ ಹೇಳಿಕೆ: ಕಾಂಗ್ರೆಸ್ ವಕ್ತಾರ ಬಂಧನ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದ್ದ ಪಶ್ಚಿಮ ಬಂಗಾಳದ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಶನಿವಾರ ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೌಸ್ತವ್ ಬಾಗ್ಚಿ
ಕೌಸ್ತವ್ ಬಾಗ್ಚಿ

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದ್ದ ಪಶ್ಚಿಮ ಬಂಗಾಳದ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಶನಿವಾರ ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೋಲ್ಕತ್ತಾದ ಬುರ್ಟೊಲ್ಲಾ ಪೊಲೀಸ್ ಠಾಣೆಯ ಪೊಲೀಸರ ತಂಡ, ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಬರಾಕ್‌ಪೋರ್‌ನಲ್ಲಿರುವ ಬಾಗ್ಚಿ ಅವರ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಶುಕ್ರವಾರ ಬಗ್ಚಿ ವಿರುದ್ಧ ಬುರ್ಟೊಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

"ನಾವು ಕೌಸ್ತವ್ ಬಾಗ್ಚಿಯನ್ನು ಬ್ಯಾರಕ್‌ಪೋರ್‌ನಲ್ಲಿರುವ ಅವರ ನಿವಾಸದಲ್ಲಿ ಬಂಧಿಸಿದ್ದೇವೆ. ನಾವು ಅದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ನಮ್ಮ ಅಧಿಕಾರಿಗಳು ಕಾಂಗ್ರೆಸ್ ನಾಯಕನೊಂದಿಗೆ ಮಾತನಾಡುತ್ತಿದ್ದಾರೆ" ಎಂದು ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ಬಂಧಿತ ಬಾಗ್ಚಿ ಅವರನ್ನು ಬುರ್ಟೊಲ್ಲಾ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com