ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ನಟ ಶೀಜನ್ ಖಾನ್‌ಗೆ ಜಾಮೀನು
ಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಅವರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
Published: 04th March 2023 03:49 PM | Last Updated: 04th March 2023 03:49 PM | A+A A-

ತುನಿಶಾ ಶರ್ಮಾ - ಶೀಜನ್ ಖಾನ್
ಮುಂಬೈ: ಸಹ ನಟಿ ತುನಿಶಾ ಶರ್ಮಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತನಾಗಿರುವ ನಟ ಶೀಜನ್ ಖಾನ್ ಅವರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲಾ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
ಸದ್ಯ ನ್ಯಾಯಾಂಗ ಬಂಧನದಲ್ಲಿರುವ 28 ವರ್ಷದ ಶೀಜನ್ ಖಾನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್.ಡಿ.ದೇಶಪಾಂಡೆ ಅವರು, 1,00,000 ರೂ. ಶ್ಯೂರಿಟಿ ಮೇಲೆ ಆರೋಪಿಗೆ ಜಾಮೀನು ನೀಡಿದ್ದಾರೆ.
ನಟನಿಗೆ ಪಾಸ್‌ಪೋರ್ಟ್ ಒಪ್ಪಿಸುವಂತೆ ಕೋರ್ಟ್ ಆದೇಶ ನೀಡಿದ್ದು, ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯದೆ ದೇಶ ತೊರೆಯದಂತೆ ಸೂಚಿಸಿದೆ.
ಇದನ್ನು ಓದಿ: ತುನಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ: ಶೀಜನ್ ಖಾನ್‌ಗೆ ಜಾಮೀನು ನಿರಾಕರಿಸಿದ ಕೋರ್ಟ್
ವಕೀಲರಾದ ಶೈಲೇಂದ್ರ ಮಿಶ್ರಾ ಮತ್ತು ಶರದ್ ರೈ ಅವರು ಆರೋಪಿ ಶೀಜನ್ ಖಾನ್ ಪರವಾಗಿ ವಾದಿಸಿದ್ದರು.
ಡಿಸೆಂಬರ್ 24, 2022 ರಂದು ಪಾಲ್ಘರ್‌ನ ವಾಲಿವ್ ಬಳಿ ಟಿವಿ ಧಾರಾವಾಹಿಯ ಸೆಟ್‌ನಲ್ಲಿ ತುನಿಶಾ ಶರ್ಮಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಶರ್ಮಾ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ನಟ ಶೀಜನ್ ಖಾನ್(28) ಅವರನ್ನು ಮರುದಿನ ಬಂಧಿಸಲಾಗಿತ್ತು.