ಬಿಜೆಪಿಯ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಿದ ಚೆನ್ನೈ ಸೈಬರ್ ಕ್ರೈಮ್
ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾದ ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಭಾನುವಾರ ಪ್ರಕರಣ ದಾಖಲಿಸಿದೆ. ಅವರ ವಿರುದ್ಧ ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Published: 05th March 2023 03:19 PM | Last Updated: 05th March 2023 04:04 PM | A+A A-

ಕೆ. ಅಣ್ಣಾಮಲೈ
ಚೆನ್ನೈ: ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾದ ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಭಾನುವಾರ ಪ್ರಕರಣ ದಾಖಲಿಸಿದೆ. ಅವರ ವಿರುದ್ಧ ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಪ್ರಕಾರ, ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ), 153A(1)(a) (ವಿವಿಧ ಪ್ರಾದೇಶಿಕ/ಭಾಷೆ/ಜಾತಿ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು), 505(1)(b) (ಸಾರ್ವಜನಿಕವಾಗಿ ಭಯ ಉಂಟುಮಾಡುವ ಉದ್ದೇಶ) ಮತ್ತು 505(1)(ಸಿ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿಯ ಆಧಾರದ ಮೇಲೆ ಅಶಾಂತಿಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಉದ್ದೇಶದಿಂದ ವದಂತಿ ಅಥವಾ ಆತಂಕಕಾರಿ ಸುದ್ದಿಗಳನ್ನು ಹೊಂದಿರುವ ಯಾವುದೇ ಹೇಳಿಕೆ ಅಥವಾ ವರದಿಯನ್ನು ಮಾಡುವವರು, ಪ್ರಕಟಿಸುವವರು ಅಥವಾ ಪ್ರಸಾರ ಮಾಡುವವರು) ಪ್ರಕರಣ ದಾಖಲಿಸಲಾಗಿದೆ.
ಈ ವಿಚಾರವಾಗಿ ಅಣ್ಣಾಮಲೈ ಪ್ರತಿಕ್ರಿಯೆ ನೀಡಿರುವ ಹೇಳಿಕೆಯನ್ನು ತಮಿಳುನಾಡು ಬಿಜೆಪಿಯ ಅಧಿಕೃತ ಹ್ಯಾಂಡಲ್ ಬಳಸಿ ಟ್ವೀಟ್ ಪೋಸ್ಟ್ ಮಾಡಲಾಗಿದೆ. ಅಣ್ಣಾಮಲೈ ಸಹಿ ಮಾಡಿರುವ ಹೇಳಿಕೆಯಲ್ಲಿ, 'ಡಿಎಂಕೆಯ ಹಿಂದಿ ವಿರೋಧಿ ಆಂದೋಲನದಿಂದಾಗಿ ತಮಿಳುನಾಡಿನಲ್ಲಿ ವಲಸೆ ಕಾರ್ಮಿಕರ ವಿರುದ್ಧ ತಾರತಮ್ಯ ಪ್ರಾರಂಭವಾಯಿತು ಎಂದಿರುವ ಅವರು, ಹಲವಾರು ಡಿಎಂಕೆ ಸಚಿವರು, ಶಾಸಕರು ಮತ್ತು ಸಂಸದರನ್ನು ಹೆಸರಿಸಿದ್ದರು. ಅವರು ಆಪಾದಿತ ಹೇಳಿಕೆಗಳನ್ನೂ ನೀಡಿದ್ದರು. ಈ ಸಂಬಂಧ ತನಿಖೆಗಳು ನಡೆಯುತ್ತಿವೆ.