ಎರಡನೇ ಬಾರಿ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ನೇಮಕ, ಮಾರ್ಚ್ 8ಕ್ಕೆ ಪ್ರಮಾಣ
ಬಿಜೆಪಿ ನಾಯಕ ಮಾಣಿಕ್ ಸಹಾ ಅವರು ಎರಡನೇ ಬಾರಿ ತ್ರಿಪುರಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಅಗರ್ತಲಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಣಿಕ್ ಸಹಾ ಅವರನ್ನು ತ್ರಿಪುರಾದ ಮುಂದಿನ...
Published: 06th March 2023 06:55 PM | Last Updated: 06th March 2023 07:26 PM | A+A A-

ಮಾಣಿಕ್ ಸಹಾ
ಅಗರ್ತಲ: ಬಿಜೆಪಿ ನಾಯಕ ಮಾಣಿಕ್ ಸಹಾ ಅವರು ಎರಡನೇ ಬಾರಿ ತ್ರಿಪುರಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಸೋಮವಾರ ಅಗರ್ತಲಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಣಿಕ್ ಸಹಾ ಅವರನ್ನು ತ್ರಿಪುರಾದ ಮುಂದಿನ ಮುಖ್ಯಮಂತ್ರಿ ಎಂದು ಹೆಸರಿಸಲಾಯಿತು.
ಈ ಆಯ್ಕೆಯನ್ನು ಪಕ್ಷದ ಎಲ್ಲಾ ಶಾಸಕರು ಸರ್ವಾನುಮತದಿಂದ ಅನುಮೋದಿಸಿದ್ದಾರೆ ಎಂದು ಶಾಸಕಾಂಗ ಸಭೆಯ ನಂತರ ಬಿಜೆಪಿಯ ವಕ್ತಾರರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರನ್ನು ತ್ರಿಪುರ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬಹುದು ಎಂಬ ಊಹಾಪೋಹ ಇತ್ತು. ಆದರೆ ಮಾಣಿಕ್ ಸಹಾ ಅವರನ್ನು ಎರಡನೇ ಅವಧಿಗೆ ಆಯ್ಕೆ ಮಾಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದೆ.
ಇದನ್ನು ಓದಿ: ಈಶಾನ್ಯದಲ್ಲಿ ಬಿಜೆಪಿಗೆ ಭದ್ರ ಬುನಾದಿ; ಸಿಎಂ ಹಿಮಂತ ಬಿಸ್ವಾ ಶರ್ಮಾ 'ಡೀಲ್ ಮಾಸ್ಟರ್'!
ಮಾಣಿಕ್ ಸಹಾ ಅವರು ಮಾರ್ಚ್ 8 ರಂದು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ.