ಉದ್ಯೋಗಕ್ಕಾಗಿ ಭೂ ಹಗರಣ: ಶೀಘ್ರದಲ್ಲೇ ಸಿಬಿಐನಿಂದ ಲಾಲು ಪ್ರಸಾದ್ ಯಾದವ್ ವಿಚಾರಣೆ

ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂದಿಸಿದಂತೆ ಬಿಹಾರ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ತಿಳಿಸಿದೆ.
ಲಾಲೂ ಪ್ರಸಾದ್ ಯಾದವ್
ಲಾಲೂ ಪ್ರಸಾದ್ ಯಾದವ್

ಪಾಟ್ನಾ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂದಿಸಿದಂತೆ ಬಿಹಾರ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ಕೇಂದ್ರ ತನಿಖಾ ಸಂಸ್ಥೆ(ಸಿಬಿಐ) ತಿಳಿಸಿದೆ.

ಈ ಸಂಬಂಧ ಸಿಬಿಐ ಕೆಲವು ದಿನಗಳ ಹಿಂದೆ ಲಾಲು ಪ್ರಸಾದ್ ಯಾದವ್‌ ಅವರಿಗೆ ನೋಟಿಸ್ ನೀಡಿತ್ತು ಎಂದು ಅವರು ಹೇಳಿದ್ದಾರೆ.

"ಕೆಲವು ದಿನಗಳ ಹಿಂದೆ, ಉದ್ಯೋಗಕ್ಕಾಗಿ ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್‌ ಅವರಿಗೆ ನೋಟಿಸ್ ನೀಡಿತ್ತು. ಸಿಬಿಐ ಶೀಘ್ರದಲ್ಲೇ ಲಾಲು ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ" ಎಂದು ಸಿಬಿಐ ಅಧಿಕಾರಿಯೊಬ್ಬರು ಸೋಮವಾರ ಎಎನ್‌ಐಗೆ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂದಿಸಿದಂತೆ ಲಾಲು ಪ್ರಸಾದ್ ಯಾದವ್ ಅವರ ಪತ್ನಿ, ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದ ಶೋಧ ಕಾರ್ಯ ನಡೆಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ, ಅವರ ಪುತ್ರಿ ಮೀಸಾ ಭಾರತಿ ಮತ್ತು ಇತರ 13 ಮಂದಿ ವಿರುದ್ಧ ಸಿಬಿಐ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಚಾರ್ಜ್‌ಶೀಟ್ ಸಲ್ಲಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com