
ಸಾಂದರ್ಭಿಕ ಚಿತ್ರ
ಉಧಂಪುರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಮಾದಕ ವಸ್ತು ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಉಧಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮ್ಮು-ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, 100 ಕೆಜಿಯಷ್ಟು ಡ್ರಗ್ಸ್ (ಗಸಗಸೆ ಸ್ಪ್ರಾ) ವಶಕ್ಕೆ ಪಡೆದಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 44ರ ಜಖಾನಿ ಚೆಕ್ ನಕಾ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಪಂಜಾಬ್ ಕಡಗೆ ತೆರಳುತ್ತಿದ್ದ ಟ್ರಕ್ ನಲ್ಲಿ ಡ್ರಗ್ಸ್ ಕಂಡುಬಂದಿದ್ದು, ಟ್ರಕ್ ಚಾಲಕ ಹಾಗೂ ಸಹ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಉಧಂಪುರ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.