ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧಿಸಲಿದೆ: ಶರದ್ ಪವಾರ್
ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಹೇಳಿದ್ದಾರೆ.
Published: 06th March 2023 04:04 PM | Last Updated: 06th March 2023 07:21 PM | A+A A-

ಶರದ್ ಪವಾರ್
ಪುಣೆ: ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.
ಇಂದು ಪುಣೆ ನಗರದ ಕಸ್ಬಾ ಪೇಠ್ ವಿಧಾನಸಭಾ ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕ ರವೀಂದ್ರ ಧಾಂಗೇಕರ್ ಅವರ ನಿವಾಸಕ್ಕೆ ಭೇಟಿ ನೀಡಿದ ನಂತರ ಪವಾರ್ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಳೆದ ಹಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದ್ದ ಕಸ್ಬಾ ಪೇಠ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಧಾಂಗೇಕರ್ ಅವರು ಸಾಮಾನ್ಯ ಜನರಿಂದ ಆಯ್ಕೆಯಾಗಿದ್ದಾರೆ ಎಂದು ಪವಾರ್ ಹೇಳಿದ್ದಾರೆ.
ಇದನ್ನು ಓದಿ: ಬಿಜೆಪಿ ವಶದಲ್ಲಿದ್ದ ಅಮರಾವತಿ ಕೌನ್ಸಿಲ್ ಸ್ಥಾನ ಕಿತ್ತುಕೊಂಡ ಎಂವಿಎ
"ಎಂವಿಎ ಮಿತ್ರ ಪಕ್ಷಗಳು ಒಟ್ಟಿಗೆ ಇರುವುದನ್ನು ಖಚಿತಪಡಿಸಿಕೊಳ್ಳುವುದು, ಜಂಟಿ ನಿರ್ಧಾ ತೆಗೆದುಕೊಳ್ಳುವುದು ಮತ್ತು ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಒಂದಾಗಿ ಚುನಾವಣೆ ಎದುರಿಸಲಾಗುವುದು" ಎಂದು ಎನ್ ಸಿಪಿ ಮುಖ್ಯಸ್ಥರು ತಿಳಿಸಿದ್ದಾರೆ.