‘ಲವ್ ಯೂ ಬೇಬಿ.. ಮೈ ಎವರ್ ಬ್ಯೂಟಿಫುಲ್ ಜಾಕ್ವೆಲಿನ್’: ಜೈಲಿನಲ್ಲಿದ್ದುಕೊಂಡೇ ಪ್ರೇಯಸಿಗೆ ಸುಕೇಶ್ ಚಂದ್ರಶೇಖರ್ 'ಹೋಳಿ ಲವ್ ಲೆಟರ್'!
200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಸುಕೇಶ್ ಚಂದ್ರಶೇಖರ್ ತನ್ನ ಬಾಲಿವುಡ್ ಪ್ರೇಯಸಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ಪ್ರೇಮಪತ್ರ ಬರೆದಿದ್ದಾನೆ.
Published: 07th March 2023 12:53 PM | Last Updated: 07th March 2023 03:09 PM | A+A A-

ಸುಕೇಶ್ ಚಂದ್ರಶೇಖರ್ ಮತ್ತು ನಟಿ ಜಾಕ್ವೆಲಿನ್ ಫರ್ನಾಂಡಿಸ್
ನವದೆಹಲಿ: 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಸುಕೇಶ್ ಚಂದ್ರಶೇಖರ್ ತನ್ನ ಬಾಲಿವುಡ್ ಪ್ರೇಯಸಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ಪ್ರೇಮಪತ್ರ ಬರೆದಿದ್ದಾನೆ.
ಹೌದು.. ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ಗೆ ಸಾಕಷ್ಟು ತೊಂದರೆ ಆಗುತ್ತಿದೆ. ಅವರು ನಿರಂತರವಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಅವರಿಗೆ ಮುಕ್ತಿ ಸಿಗದಂತಾಗಿದೆ. ಇದರ ಜೊತೆಗೆ ಸುಕೇಶ್ ಚಂದ್ರಶೇಖರ್ ಜೈಲಿನಲ್ಲಿದ್ದುಕೊಂಡೇ ಜಾಕ್ವೆಲಿನ್ಗೆ ಕಿರಿಕಿರಿ ಉಂಟು ಮಾಡುತ್ತಿದ್ದಾನೆ. ಹೋಳಿ ಸಂದರ್ಭದಲ್ಲಿ ಆತ ನಟಿಗೆ ಲವ್ ಲೆಟರ್ ಬರೆದಿದ್ದಾನೆ. ಈ ವೇಳೆ ‘ಲವ್ ಯೂ ಬೇಬಿ’ ಎಂದು ಸುಕೇಶ್ ಪತ್ರದಲ್ಲಿ ಬರೆದಿದ್ದಾನೆ.
ಇದನ್ನೂ ಓದಿ: ಜಾಕ್ವೆಲಿನ್ ಬಗ್ಗೆ ನೋರಾಗೆ ಯಾವಾಗಲೂ ಅಸೂಯೆಯಿತ್ತು: ವಂಚಕ ಸುಕೇಶ್ ಚಂದ್ರಶೇಖರ್
ಪತ್ರದಲ್ಲಿ ಏನಿದೆ?
ಇನ್ನು ಸುಕೇಶ್ ಬರೆದಿರುವ ಪ್ರೇಮಪತ್ರದಲ್ಲಿ, 'ಒಳ್ಳೆಯ ವ್ಯಕ್ತಿ, ನನ್ನ ಬ್ಯೂಟಿಫುಲ್ ಜಾಕ್ವೆಲಿನ್ಗೆ ಹೋಳಿ ಶುಭಾಶಯ. ಈ ದಿನ ಬಣ್ಣಗಳ ಹಬ್ಬ. ಮರೆಯಾದ ಬಣ್ಣಗಳು 100 ಪಟ್ಟು ಹೆಚ್ಚಾಗಿ ನಿಮ್ಮ ಬಳಿ ಬರುತ್ತವೆ. ಈ ವರ್ಷ ನಿಮ್ಮ ಬದುಕು ಪ್ರಕಾಶಮಾನವಾಗುತ್ತದೆ. ಆ ರೀತಿ ಆಗುವಂತೆ ಮಾಡೋದು ನನ್ನ ಜವಾಬ್ದಾರಿ. ಐ ಲವ್ ಯೂ ಮೈ ಬೇಬಿ ಗರ್ಲ್. ಯಾವಾಗಲೂ ನಗುತ್ತಾ ಇರು. ಲವ್ ಯು ಮೈ ಪ್ರಿನ್ಸೆಸ್. ನಾನು ನಿನ್ನನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನನ್ನ ಬೊಮ್ಮ ನೀನು, ನನ್ನ ಪ್ರೀತಿ’ ಎಂದು ಪತ್ರದಲ್ಲಿ ಸುಕೇಶ್ ಬರೆದುಕೊಂಡಿದ್ದಾನೆ.
ಇದನ್ನೂ ಓದಿ: ನನ್ನ ಭಾವನೆಗಳ ಜತೆ ಆಟ ಆಡಿದ, ನನ್ನ ಜೀವನ ನರಕ ಮಾಡಿದ: ನಟಿ ಜಾಕ್ವೆಲಿನ್ ಫರ್ನಾಂಡೀಸ್
ಚಾಕ್ವೆಲಿನ್-ಸುಕೇಶ್ ಸಂಬಂಧ
ಜಾಕ್ವೆಲಿನ್ ಹಾಗೂ ಸುಕೇಶ್ ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಸಂಬಂಧಿಸಿದಂತೆ ಕೆಲವು ಫೋಟೋಗಳನ್ನು ಸುಕೇಶ್ ಲೀಕ್ ಮಾಡಿದ್ದ. ಇದರಿಂದ ಜಾಕ್ವೆಲಿನ್ಗೆ ಮುಜುಗರ ಆಗಿತ್ತು. ಈ ಫೋಟೋದಿಂದ ನಟಿಗೆ ಸಂಕಷ್ಟಕೂಡ ಹೆಚ್ಚಿತ್ತು. ಅವರು ವಿವಿಧ ರೀತಿಯಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಸುಕೇಶ್ನಿಂದ ಹಲವು ದುಬಾರಿ ಗಿಫ್ಟ್ ಪಡೆದಿರುವುದರಿಂದ ಜಾಕ್ವೆಲಿನ್ ಅವರು ಜಾರಿ ನಿರ್ದೇಶನಾಲಯದಿಂದ ಎದುರಾಗುತ್ತಿರುವ ಪ್ರಶ್ನೆಗೆ ಉತ್ತರ ನೀಡುತ್ತಿದ್ದಾರೆ. ಸುಕೇಶ್ ಚಂದ್ರಶೇಖರ್ ಸಹಚರೆ ಪಿಂಕಿ ಇರಾನಿಯಿಂದ ಜಾಕ್ವೆಲಿನ್ಗೆ ಆತನ ಪರಿಚಯ ಆಗಿತ್ತು. ಸರ್ಕಾರಿ ಅಧಿಕಾರಿ ಎಂದು ಸುಕೇಶ್ನನ್ನು ಪಿಂಕಿ ಪರಿಚಯಿಸಿದ್ದಳು. ‘ನಾನು ಸನ್ ಟಿವಿ ಮಾಲೀಕ’ ಎಂದು ಕೂಡ ಸುಕೇಶ್ ಹೇಳಿಕೊಂಡಿದ್ದ. ಜಯಲಲಿತಾ ತನ್ನ ಚಿಕ್ಕಮ್ಮ ಎಂದು ಆತ ಹೇಳಿಕೊಂಡಿದ್ದ.