ಯುಪಿ: ಬಲ್ಲಿಯಾದ ಸಂತ ರವಿದಾಸ್ ಪ್ರತಿಮೆಗೆ ಬೆಂಕಿ, ಐವರ ವಿರುದ್ಧ ಕೇಸ್ ದಾಖಲು!
ಚಿಟ್‌ಬಾದ್‌ಗಾಂವ್ ಪ್ರದೇಶದ ಹಳ್ಳಿಯೊಂದರಲ್ಲಿ ಸಂತ ರವಿದಾಸ್ ದೇವಸ್ಥಾನಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 07th March 2023 04:18 PM | Last Updated: 07th March 2023 04:18 PM | A+A A-

ಸಂತ ರವಿದಾಸ್
ಬಲ್ಲಿಯಾ(ಉತ್ತರಪ್ರದೇಶ): ಚಿಟ್‌ಬಾದ್‌ಗಾಂವ್ ಪ್ರದೇಶದ ಹಳ್ಳಿಯೊಂದರಲ್ಲಿ ಸಂತ ರವಿದಾಸ್ ದೇವಸ್ಥಾನಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ರಾತ್ರಿ ಮಿರ್ಚಿ ಖುರ್ಡ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬರ ಪ್ರಚೋದನೆಯಿಂದಾಗಿ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಉಪ ಎಸ್ಪಿ ಅಶೋಕ್ ಮಿಶ್ರಾ ಹೇಳಿದ್ದಾರೆ.
ಗ್ರಾಮಸ್ಥರ ದೂರುಗಳ ಮೇರೆಗೆ ರಾಜೇಶ್ ತಿವಾರಿ, ಆದಿತ್ಯ, ರವೀಂದ್ರ, ಜಂಕಿ ಮತ್ತು ಮುನ್ನಾ ತಿವಾರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿಭಾಗಗಳು ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆಗಟ್ಟುವಿಕೆ) ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇವಾಲಯದೊಳಗಿನ ಸಂತ ರವಿದಾಸ್ ಅವರ ಪ್ರತಿಮೆ ಬೆಂಕಿಯಲ್ಲಿ ಹಾನಿಗೊಳಗಾಗಿದೆ. ಈ ಸಂಬಂಧ ವಿವರವಾದ ತನಿಖೆ ನಡೆಯುತ್ತಿದೆ ಎಂದು ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್(ಎಸ್‌ಡಿಎಂ) ಪ್ರಶಾಂತ್ ನಾಯಕ್ ಹೇಳಿದ್ದಾರೆ.
ಸಂತ ರವಿದಾಸ್ ಅವರ ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಹಳ್ಳಿಯಲ್ಲಿ ಪೊಲೀಸ್ ಬಿಗಿಭದ್ರತೆ ನಿಯೋಜಿಸಲಾಗಿದೆ.