ತಮಿಳುನಾಡು: ವಲಸಿಗರ ಮೇಲೆ ದಾಳಿ ಕುರಿತು ನಕಲಿ ವಿಡಿಯೋ ಶೇರ್ ಮಾಡುತ್ತಿದ್ದ ಬಿಹಾರ ವ್ಯಕ್ತಿಯ ಬಂಧನ

ತಿರುಪ್ಪೂರ್ ಮತ್ತು ತಮಿಳುನಾಡಿನ ಇತರ ಭಾಗಗಳಲ್ಲಿ ಬಿಹಾರ ವಲಸೆ ಕಾರ್ಮಿಕರ ಮೇಲೆ ದಾಳಿಯ ನಕಲಿ ವಿಡಿಯೊಗಳನ್ನು ಶೇರ್ ಮಾಡುತ್ತಿದ್ದ ಬಿಹಾರ ಮೂಲದ ರೂಪೇಶ್ ಕುಮಾರ್ ಎಂಬಾತನನ್ನು ತಿರುಪ್ಪೂರ್ ಜಿಲ್ಲೆಯ ಸೈಬರ್ ಕ್ರೈಂ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುಪ್ಪೂರ್: ತಿರುಪ್ಪೂರ್ ಮತ್ತು ತಮಿಳುನಾಡಿನ ಇತರ ಭಾಗಗಳಲ್ಲಿ ಬಿಹಾರ ವಲಸೆ ಕಾರ್ಮಿಕರ ಮೇಲೆ ದಾಳಿಯ ನಕಲಿ ವಿಡಿಯೊಗಳನ್ನು ಶೇರ್ ಮಾಡುತ್ತಿದ್ದ ಬಿಹಾರ ಮೂಲದ ರೂಪೇಶ್ ಕುಮಾರ್ ಎಂಬಾತನನ್ನು ತಿರುಪ್ಪೂರ್ ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರ ತಂಡ ಮಂಗಳವಾರ ಬಂಧಿಸಿದೆ.

ಪೊಲೀಸ್ ಮೂಲಗಳ ಪ್ರಕಾರ, ಬಿಹಾರದ ನಿವಾಸಿ ರೂಪೇಶ್ ಕುಮಾರ್ ಅವರು ತಿರುಪ್ಪೂರ್ ಜಿಲ್ಲೆಯ ಗಾರ್ಮೆಂಟ್ ಗಳಲ್ಲಿ ಕೆಲಸ ಮಾಡುವ ಬಿಹಾರದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸುತ್ತಿರುವ ಸುಳ್ಳು ವಿಡಿಯೊಗಳನ್ನು ಸೃಷ್ಟಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಈ ಸಂಬಂಧ ಸೈಬರ್ ಕ್ರೈಮ್ ಪೊಲೀಸರು ರೂಪೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದರು ಮತ್ತು ವಿಡಿಯೊಗಳನ್ನು ತೆಗೆದುಹಾಕುವಂತೆ ಕೇಳಿಕೊಂಡಿದ್ದರು. ಆದರೆ ರೂಪೇಶ್ ಕುಮಾರ್ ಮತ್ತಷ್ಟು ವಿಡಿಯೊಗಳನ್ನು ಹಂಚಿಕೊಂಡಿದ್ದರಿಂದ ಸೈಬರ್ ಕ್ರೈಂ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಬಂಧನ ಭೀತಿಯಿಂದ ತೆಲಂಗಾಣದಲ್ಲಿ ತಲೆಮರೆಸಿಕೊಂಡಿದ್ದ ರೂಪೇಶ್ ನನ್ನು ಮೊಬೈಲ್ ಟ್ರ್ಯಾಕಿಂಗ್ ತಂತ್ರಜ್ಞಾನ ಬಳಸಿ ತಮಿಳುನಾಡು ಪೊಲೀಸರು ಬಂಧಿಸಿದ್ದು, ತಮಿಳುನಾಡಿಗೆ ಕರೆದೊಯ್ಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com