ಉತ್ತರ ಪ್ರದೇಶ: ನಮಾಜ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರು ಹರಿದು ನಾಲ್ವರು ಬಾಲಕರ ದುರ್ಮರಣ
ನಮಾಜ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಬಾರಾಬಂಕಿ ಜಿಲ್ಲೆಯ ಬಡೋಸರೈ ಪ್ರದೇಶದಲ್ಲಿ ಬುಧವಾರ ನಡೆದಿದೆ.
Published: 08th March 2023 09:21 PM | Last Updated: 09th March 2023 02:02 PM | A+A A-

ಸಾಂದರ್ಭಿಕ ಚಿತ್ರ
ಬಾರಾಬಂಕಿ: ನಮಾಜ್ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಬಾರಾಬಂಕಿ ಜಿಲ್ಲೆಯ ಬಡೋಸರೈ ಪ್ರದೇಶದಲ್ಲಿ ಬುಧವಾರ ನಡೆದಿದೆ.
ಮೃತರನ್ನು ಮೊಹಮ್ಮದ್ ಖಾಲಿದ್ (14), ಮೊಹಮ್ಮದ್ ಶಾ (14), ಮೊಹಮ್ಮದ್ ರೆಹಾನ್ (14) ಮತ್ತು ಮೊಹಮ್ಮದ್ ರಯೀಸ್ (18) ಎಂದು ಗುರುತಿಸಲಾಗಿದೆ.
ಬೆಳಗ್ಗೆ ಸ್ಥಳೀಯ ಮಸೀದಿಗೆ ಪ್ರಾರ್ಥನೆ ಸಲ್ಲಿಸಲು ತೆರಳಿದ್ದ ಅವರು ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಾರು ಅವರ ಮೇಲೆ ಹರಿದು ನಂತರ ಮರಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಾಳುಗಳನ್ನು ಸಿರೌಲಿ ಗೌಸ್‌ಪುರದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಖಾಲಿದ್, ರೆಹಾನ್ ಮತ್ತು ಶಾ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಇನ್ನು ಗಂಭೀರವಾಗಿ ಗಾಯಗೊಂಡ ರಯೀಸ್‌ನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.