ತಂದೆಯ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ: ಬಿಜೆಪಿ ನಾಯಕಿ ಖುಷ್ಬು
ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆಯಿಂದಲೆ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೇ ಎಂಬ ನನ್ನ ಹೇಳಿಕೆ ಬಗ್ಗೆ ನನಗೆ ಯಾವುದೇ ನಾಚಿಕೆಯಾಗಿಲ್ಲ ಎಂದು ಬಿಜೆಪಿ ನಾಯಕಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಹೇಳಿದ್ದಾರೆ.
Published: 08th March 2023 12:36 PM | Last Updated: 08th March 2023 04:15 PM | A+A A-

ಖುಷ್ಬೂ ಸುಂದರ್
ಹೈದರಾಬಾದ್: ಚಿಕ್ಕ ವಯಸ್ಸಿನಲ್ಲಿ ನನ್ನ ತಂದೆಯಿಂದಲೆ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೇ ಎಂಬ ನನ್ನ ಹೇಳಿಕೆ ಬಗ್ಗೆ ನನಗೆ ಯಾವುದೇ ನಾಚಿಕೆಯಾಗಿಲ್ಲ ಎಂದು ಬಿಜೆಪಿ ನಾಯಕಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಹೇಳಿದ್ದಾರೆ.
ಈ ಹಿಂದೆ ಖುಷ್ಬೂ ಅವರು ತಮ್ಮ ತಂದೆಯಿಂದಲೇ ಲೈಂಗಿಕ ಕಿರುಕುಳ ಎದುರಿಸಿದ್ದ ಕುರಿತು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ವ್ಯಾಪಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಖುಷ್ಬು ಅವರು, ತಂದೆಯ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: 8 ವರ್ಷದವಳಿದ್ದಾಗ ತಂದೆಯಿಂದಲೇ ಲೈಂಗಿಕ ದೌರ್ಜನ್ಯ, ಎಷ್ಟು ಹೇಳಿದರೂ ನನ್ನ ತಾಯಿ ನಂಬುತ್ತಿರಲಿಲ್ಲ: ಖುಷ್ಬೂ ಸುಂದರ್
'ನಾನು ಆಶ್ಚರ್ಯಕರವಾದ ಹೇಳಿಕೆಯನ್ನು ನೀಡಿಲ್ಲ, ಆ ಹೇಳಿಕೆ ನನ್ನಿಂದ ಹೊರಬಂದ ಪ್ರಾಮಾಣಿಕತೆ ಎಂದು ನಾನು ಭಾವಿಸುತ್ತೇನೆ. ನಾನು ಹೇಳಿದ್ದಕ್ಕೆ ನಾಚಿಕೆಪಡುವುದಿಲ್ಲ ಏಕೆಂದರೆ ಇದು ನನಗೆ ಸಂಭವಿಸಿದೆ ಮತ್ತು ಅಪರಾಧಿಯು ತನ್ನ ಬಳಿ ಇರುವುದಕ್ಕೆ ನಾಚಿಕೆಪಡಬೇಕು ಎಂದು ನಾನು ಭಾವಿಸುತ್ತೇನೆ ಎಂದು ಅವರು ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.
It was BIG of @khushsundar to Open Up About her Sexual Abuse. When strong and successful individuals like her speak it gives Many the courage to break their Silence. https://t.co/U1SRezL42t
— Shreya Dhoundial (@shreyadhoundial) March 8, 2023
ಮಹಿಳಾ ಆಯೋಗದ ಸದಸ್ಯೆಯಾದ ನಂತರ ತಮ್ಮ ಎಂಟನೆ ವಯಸ್ಸಿನಲ್ಲಿ ತಂದೆ ನಡೆಸಿದ್ದ ಲೈಂಗಿಕ ಕಿರುಕುಳದ ಬಗ್ಗೆ ಬಾಯ್ಬಿಟ್ಟಿದ್ದರು.
ಇದನ್ನೂ ಓದಿ: ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಖುಷ್ಬೂ ಸುಂದರ್ ನಾಮನಿರ್ದೇಶನ
2021ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಡಿಎಂಕೆ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದ ಖುಷ್ಬು ಅವರನ್ನು ಬಿಜೆಪಿ ಪಕ್ಷ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿತ್ತು.