ಉತ್ತರ ಪ್ರದೇಶ: ಗೋವುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗೆ ಅಪರಿಚಿತರಿಂದ ಗುಂಡಿನ ದಾಳಿ

ಟ್ರಕ್‌ನಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಪರಿಣಾಮ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯ ಪಾರಾ ಪ್ರದೇಶದಲ್ಲಿ  ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈನ್ ಪುರಿ: ಟ್ರಕ್‌ನಲ್ಲಿ ಹಸುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ ಪರಿಣಾಮ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯ ಪಾರಾ ಪ್ರದೇಶದಲ್ಲಿ  ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಈ ಘಟನೆ ಬುಧವಾರ ನಡೆದಿದೆ ಎಂದು ಪ್ಯಾರಾ ಪೊಲೀಸ್ ಠಾಣಾಧಿಕಾರಿ ಟಿಬಿ ಸಿಂಗ್ ತಿಳಿಸಿದ್ದಾರೆ. ಪ್ರೇಮ್ ಸಿಂಗ್ (50) ತಮ್ಮ ಟ್ರಕ್‌ನಲ್ಲಿ 13 ಹಸುಗಳನ್ನು ಮೈನ್‌ಪುರಿಗೆ ಸಾಗಿಸುತ್ತಿದ್ದಾಗ ಅವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಈಗ ಸ್ಥಿರವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಗುಂಡಿನ ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ತನಿಖೆ ನಡೆಯುತ್ತಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com