ಕಳೆದ ಒಂಬತ್ತು ವರ್ಷಗಳಲ್ಲಿ ಭಾರತ ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಸಾಗಿದೆ: ಪ್ರಧಾನಿ ಮೋದಿ

ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು  ಶುಕ್ರವಾರ ಹೇಳಿದ್ದಾರೆ.
ಪಿಎಂ ನರೇಂದ್ರ ಮೋದಿ
ಪಿಎಂ ನರೇಂದ್ರ ಮೋದಿ

ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಮಹಿಳಾ ಅಭಿವೃದ್ಧಿಯಿಂದ ಮಹಿಳಾ ನೇತೃತ್ವದ ಅಭಿವೃದ್ಧಿಯತ್ತ ಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು  ಶುಕ್ರವಾರ ಹೇಳಿದ್ದಾರೆ.

ಮಹಿಳಾ ಸಬಲೀಕರಣದ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದು ದೇಶದಲ್ಲಿ ಎಂಜಿನಿಯರಿಂಗ್, ವಿಜ್ಞಾನ, ತಂತ್ರಜ್ಞಾನ ಮತ್ತು ಗಣಿತ ಕ್ಷೇತ್ರಗಳಲ್ಲಿ ಮಹಿಳೆಯರ ದಾಖಲಾತಿ ಶೇಕಡಾ 42 ರಷ್ಟಿದೆ ಎಂದರು.

ಸ್ವಸಹಾಯ ಗುಂಪುಗಳಲ್ಲಿಯೂ ನಾವು ಯುನಿಕಾರ್ನ್‌ಗಳನ್ನು ಮಾಡಬಹುದು. ಅದಕ್ಕಾಗಿಯೇ, ನಾವು ಈ ವರ್ಷದ ಬಜೆಟ್‌ನಲ್ಲಿ ಆ ಗುರಿಯನ್ನು ತಂದಿದ್ದೇವೆ ಎಂದು ಅವರು ಹೇಳಿದರು.

1 ಬಿಲಿಯನ್ ಅಮೆರಿಕನ್ ಡಾಲರ್‌ಗಿಂತ (ಅಂದಾಜು ₹ 7,895 ಕೋಟಿ) ಹೆಚ್ಚಿನ ಮಾರುಕಟ್ಟೆ ಬಂಡವಾಳ ಹೊಂದಿರುವ ನವೋದ್ಯಮ ಕಂಪನಿಯನ್ನು ‘ಯೂನಿಕಾರ್ನ್‌’ ಎಂದು ಗುರುತಿಸಲಾಗುತ್ತದೆ. ಯುನಿಕಾರ್ನ್ ಕಂಪನಿಗಳು ಸ್ಟಾಕ್ ಮಾರುಕಟ್ಟೆಯಲ್ಲಿ ಪಟ್ಟಿ ಮಾಡದೆ 1 ಶತಕೋಟಿ ಡಾಲರ್ ಮೌಲ್ಯವನ್ನು ತಲುಪುತ್ತವೆ.

ಮುದ್ರಾ ಸಾಲದ ಸುಮಾರು 70 ಪ್ರತಿಶತ ಫಲಾನುಭವಿಗಳು ಮಹಿಳೆಯರಾಗಿದ್ದಾರೆ. ಈ ಮಹಿಳೆಯರು ತಮ್ಮ ಕುಟುಂಬದ ಗಳಿಕೆಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ರಾಷ್ಟ್ರಕ್ಕೆ ಹೊಸ ಆರ್ಥಿಕ ಮಾರ್ಗಗಳನ್ನು ತೆರೆಯುತ್ತಿದ್ದಾರೆ ಎಂದು ಅವರು ಹೇಳಿದರು.
ಮಹಿಳೆಯರ ಬಗೆಗಿನ ಗೌರವ ಭಾವವನ್ನು ಅವರ ಸಮಾನತೆಯೊಂದಿಗೆ ಕೂಡ ಮೋದಿ ಜೋಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com