ಕೇರಳದಲ್ಲಿ ಹೊಸ ದಾಖಲೆ ಬರೆದ ತಾಪಮಾನ: 54 ಡಿಗ್ರಿ ಸೆಲ್ಸಿಯಸ್​ ಉಷ್ಣಾಂಶ ದಾಖಲು

ದೇವರನಾಡು ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಿರುವನಂತಪುರಂ: ದೇವರನಾಡು ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಕೆಎಸ್‌ಡಿಎಂಎ) ಗುರುವಾರ ದಿನನಿತ್ಯದ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದು,  ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ.

ಗುರುವಾರ, ಐದು ಜಿಲ್ಲೆಗಳಾದ ಕೋಝಿಕ್ಕೋಡ್, ಅಲಪ್ಪುಳ, ಕೊಟ್ಟಾಯಂ, ಪತ್ತನಂತಿಟ್ಟ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

ಸ್ವಯಂಚಾಲಿತ ಹವಾಮಾನ ಕೇಂದ್ರಗಳ(AWS) ಮಾಹಿತಿಯ ಪ್ರಕಾರ, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ 54  54 ಡಿಗ್ರಿ ಸೆಲ್ಸಿಯಸ್ ಗಿಂತ ಉಷ್ಣಾಂಶ ದಾಖಲಾಗಿದೆ. ಇದು ಆರೋಗ್ಯದ ಮೇಲೆ ಗಂಭೀರ ಅಪಾಯವನ್ನು ಸೂಚಿಸುತ್ತದೆ.

ಉಷ್ಣಾಂಶ ಏರಿಕೆಯು ಆರೋಗ್ಯ ಸಮಸ್ಯೆಗಳಿರುವ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಮಂಜೇರಿ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ ಟಿ ಎಸ್ ಅನೀಶ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com