ಆಸ್ಟ್ರೇಲಿಯಾದಲ್ಲಿ ದೇವಸ್ಥಾನಗಳ ಮೇಲೆ ದಾಳಿ: ಆಸೀಸ್ ಪಿಎಂ ಬಳಿ ವಿಷಯ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರೊಂದಿಗೆ ಆಸ್ಟ್ರೇಲಿಯಾದಲ್ಲಿ ಇತ್ತೀಚಿಗೆ ದೇವಾಲಯಗಳ ಮೇಲೆ ನಡೆದ ದಾಳಿಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ಆಂಟೋನಿ ಅಲ್ಬನೀಸ್ - ಪ್ರಧಾನಿ ಮೋದಿ
ಆಂಟೋನಿ ಅಲ್ಬನೀಸ್ - ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಅವರೊಂದಿಗೆ ಆಸ್ಟ್ರೇಲಿಯಾದಲ್ಲಿ ಇತ್ತೀಚಿಗೆ ದೇವಾಲಯಗಳ ಮೇಲೆ ನಡೆದ ದಾಳಿಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಉಭಯ ದೇಶಗಳ ನಡುವಿ ಸಂಬಂಧಗಳನ್ನು ವಿಸ್ತರಿಸುವ ಗುರಿ ಹೊಂದಿರುವ ಸಂವಾದದ ವೇಳೆ ದೇವಸ್ಥಾನಗಳ ಮೇಲಿನ ದಾಳಿಯ ವಿಷಯ ಚರ್ಚೆಗೆ ಬಂದಿತು.

ಕಳೆದ ಕೆಲವು ವಾರಗಳಿಂದ ಆಸ್ಟ್ರೇಲಿಯದಲ್ಲಿ ದೇವಸ್ಥಾನಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ನಿರಂತರವಾಗಿ ವರದಿಗಳು ಬರುತ್ತಿರುವುದು ವಿಷಾದದ ಸಂಗತಿ ಮತ್ತು ಇಂತಹ ಸುದ್ದಿಗಳು ಭಾರತದಲ್ಲಿ ಪ್ರತಿಯೊಬ್ಬರನ್ನು ಚಿಂತೆಗೀಡುಮಾಡುವುದು ಸಹಜ ಎಂದು ಪ್ರಧಾನಿ ಮೋದಿ ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ನಾನು ಈ ಭಾವನೆಗಳನ್ನು ಮತ್ತು ಕಳವಳಗಳನ್ನು ಆಸ್ಟ್ರೇಲಿಯಾ ಪ್ರಧಾನಿ ಅಲ್ಬನೀಸ್ ಅವರಿಗೆ ತಿಳಿಸಿದ್ದೇನೆ ಮತ್ತು ಭಾರತೀಯ ಸಮುದಾಯದ ಸುರಕ್ಷತೆಯು ಅವರಿಗೆ ವಿಶೇಷ ಆದ್ಯತೆಯಾಗಿದೆ ಎಂದು ತಮಗೆ ಭರವಸೆ ನೀಡಿದ್ದಾರೆ" ಎಂದು ಪ್ರಧಾನಿ ಮೋದಿ, ಆಸೀಸ್ ಪ್ರಧಾನಿ ಸಮ್ಮುಖದಲ್ಲಿ ಹೇಳಿದ್ದಾರೆ.

"ನಮ್ಮ ತಂಡಗಳು ಈ ವಿಷಯದಲ್ಲಿ ನಿಯಮಿತವಾಗಿ ಸಂಪರ್ಕದಲ್ಲಿರುತ್ತವೆ ಮತ್ತು ಸಾಧ್ಯವಾದಷ್ಟು ಸಹಕರಿಸುತ್ತವೆ" ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com