
ಜಾರಿ ನಿರ್ದೇಶನಾಲಯ ಚಿಹ್ನೆ
ನವದೆಹಲಿ: ವಕೀಲ ನಿತೇಶ್ ರಾಣಾ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಜಾರಿ ನಿರ್ದೇಶನಾಲಯ(ಇಡಿ)ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಹುದ್ದೆಗೆ ಶನಿವಾರ ರಾಜೀನಾಮೆ ನೀಡಿದ್ದಾರೆ.
2015ರಿಂದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಣಾ, ಮಾಜಿ ಕೇಂದ್ರ ಹಣಕಾಸು ಸಚಿವ ಪಿ ಚಿದಂಬರಂ, ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಅವರ ಕುಟುಂಬ, ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧದ ಪ್ರಕರಣ ಸೇರಿದಂತೆ ಹಲವಾರು ಪ್ರಮುಖ ಪ್ರಕರಣಗಳಲ್ಲಿ ಇಡಿಯ ಪರವಾಗಿ ವಾದಿಸಿದ್ದಾರೆ.
ಇದನ್ನು ಓದಿ: ದೆಹಲಿ ಅಬಕಾರಿ ನೀತಿ ಕೇಸು: ಇಡಿ ಮುಂದೆ ವಿಚಾರಣೆಗೆ ಬಿಆರ್ ಎಸ್ ನಾಯಕಿ ಕವಿತಾ ಹಾಜರು
ಜಾರಿ ನಿರ್ದೇಶನಾಲಯ ತಮ್ಮ ಹುದ್ದೆಗೆ ಪರ್ಯಾಯ ವ್ಯವಸ್ಥೆ ಮಾಡುವವರೆಗೆ ತಮ್ಮ ಕಚೇರಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಿದೆ ಎಂದು ರಾಣಾ ಹೇಳಿದ್ದಾರೆ.