ಮಧ್ಯ ಪ್ರದೇಶ: ಗ್ಯಾಂಗ್​ರೇಪ್​ ಆರೋಪಿಯ ಮನೆ ಧ್ವಂಸ ಮಾಡಿದ ಮಹಿಳಾ ಪೊಲೀಸ್​ ಅಧಿಕಾರಿಗಳು!

ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. 
ಆರೋಪಿ ಮನೆ ಕೆಡವಿದ ಮಹಿಳಾ ಪೊಲೀಸ್ ಅಧಿಕಾರಿಗಳು
ಆರೋಪಿ ಮನೆ ಕೆಡವಿದ ಮಹಿಳಾ ಪೊಲೀಸ್ ಅಧಿಕಾರಿಗಳು

ಭೋಪಾಲ್: ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಯ ಮನೆಯನ್ನು ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಕೆಡವಲಾಯಿತು. 

ಈ ಘಟನೆ ಮಧ್ಯ ಪ್ರದೇಶದ ದಾಮೋಹ್​ನಲ್ಲಿ ನಡೆದಿದ್ದು, ಕೆಡವಲಾದ ಮನೆಯು ಕೌಶಲ್ ಕೆ. ಚೌಬೆ ಎಂಬ ವ್ಯಕ್ತಿಗೆ ಸೇರಿದ್ದಾಗಿದೆ. ಆರೋಪಿ ಚೌಬೆ, ದಾಮೋಹ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳಲ್ಲಿ ಒಬ್ಬರು. 

ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದರಿಂದ ಅದನ್ನು ಕೆಡವಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಮಧ್ಯಪ್ರದೇಶದ ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ. 

ಪ್ರಕರಣದ ಇತರ ಮೂವರು ಆರೋಪಿಗಳನ್ನು ಈ ಹಿಂದೆಯೇ ಬಂಧಿಸಲಾಗಿ ಮಾ.10ರಂದು ಮತ್ತೋರ್ವ ಆರೋಪಿ ಕಿಶೋರ್‌ನನ್ನು ಬಂಧಿಸಲಾಗಿದೆ. ಅಪರಾಧ ಕೃತ್ಯಗಳಲ್ಲಿ ತೊಡಗುವವರಲ್ಲಿ ಭಯ ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಪ್ರಶಿತಾ ಕುರ್ಮಿ ತಿಳಿಸಿದ್ದಾರೆ. 

ಮಹಿಳಾ ಪೊಲೀಸ್ ಅಧಿಕಾರಿಗಳು ಜಿಲ್ಲಾಧಿಕಾರಿಯಿಂದ ಅನುಮತಿ ಪಡೆದು ಬುಲ್ಡೋಜರ್ ಬಳಸಿ ಆರೋಪಿಯ ಮನೆ ಕೆಡವಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com