

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 456 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,89,968ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,406ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಶನಿವಾರ ತಿಳಿಸಿದೆ.
ಇದೇ ಅವಧಿಯಲ್ಲಿ ಗುಜರಾತ್‌ನಲ್ಲಿ ಒಂದು ಸಾವು ಸೇರಿದಂತೆ ಈವರೆಗೆ ಸಾವಿಗೀಡಾದವರ ಸಂಖ್ಯೆ 5,30,780ಕ್ಕೆ ಏರಿಕೆಯಾಗಿದೆ ಎಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿಯಿಂದ ತಿಳಿದುಬಂದಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ. ಸದ್ಯ ಈವರೆಗೆ 4,41,55,782 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: H3N2 ಇನ್ಫ್ಲುಯೆಂಜಾ: ಭಯ ಬೇಡ, ಜಾಗ್ರತೆ ಇರಲಿ
ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.64 ಕೋಟಿಗೂ ಅಧಿಕ ಕೋವಿವ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Advertisement