ರೈತ ನಾಯಕ ರಾಕೇಶ್ ಟಿಕಾಯತ್, ಕುಟುಂಬಕ್ಕೆ ಬೆದರಿಕೆ, ಆರೋಪಿ ಬಂಧನ
ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮತ್ತು ಅವರ ಕುಟುಂಬಕ್ಕೆ ಫೋನ್ ಮೂಲ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Published: 11th March 2023 06:25 PM | Last Updated: 11th March 2023 06:33 PM | A+A A-

ರೈತ ನಾಯಕ ರಾಕೇಶ್ ಟಿಕಾಯತ್
ನವ ದೆಹಲಿ: ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮತ್ತು ಅವರ ಕುಟುಂಬಕ್ಕೆ ಫೋನ್ ಮೂಲ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತನನ್ನು ದೇವಾ ಸಿಂಗ್ ಪುತ್ರ ವಿಶಾಲ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಭೋರಾ ಕಲಾನ್ ಠಾಣಾಧಿಕಾರಿ ಅಕ್ಷಯ್ ಶರ್ಮಾ ಸುದ್ದಿಗಾರರಿಗೆ ತಿಳಿಸಿದರು. ಆರೋಪಿ ದೆಹಲಿಯಿಂದ ಕರೆ ಮಾಡಿರುವುದು ಪತ್ತೆಯಾಗಿದ್ದು, ಅಲ್ಲಿಂದ ಮುಜಾಫರ್‌ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಎಸ್‌ಎಚ್‌ಒ ಹೇಳಿದರು.
ಅಪರಿಚಿತ ವ್ಯಕ್ತಿ ದೂರವಾಣಿ ಕರೆ ಮಾಡಿ, ರೈತ ಚಳವಳಿಗಳಿಂದ ದೂರ ಉಳಿಯದಿದ್ದರೆ ರಾಕೇಶ್ ಟಿಕಾಯತ್ ಮತ್ತು ಅವರ ಕುಟುಂಬ ಸದಸ್ಯರನ್ನು ಬಾಂಬ್ ದಾಳಿಗೆ ಗುರಿಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಕೇಶ್ ಟಿಕಾಯತ್ ಅವರ ಸಹೋದರ ನರೇಶ್ ಟಿಕಾಯಿತ್ ಅವರ ಪುತ್ರ ಗೌರವ್ ಟಿಕಾಯಿತ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬಂಧಿತ ವ್ಯಕ್ತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದರು.