
ರಜನಿ ಪಾಟೀಲ್
ನವದೆಹಲಿ: ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕರಾಗಿ ಪ್ರಮೋದ್ ತಿವಾರಿ ಮತ್ತು ಪಕ್ಷದ ಸಚೇತಕರಾಗಿ ರಜನಿ ಪಾಟೀಲ್ ಅವರನ್ನು ಕಾಂಗ್ರೆಸ್ ಶನಿವಾರ ನೇಮಕ ಮಾಡಿದೆ.
ಆನಂದ್ ಶರ್ಮಾ ಅವರ ನಿವೃತ್ತಿ ಮತ್ತು ರಾಜೀವ್ ಸತವ್ ಅವರ ನಿಧನದ ನಂತರ ಖಾಲಿಯಾದ ಸ್ಥಾನಗಳಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಇಬ್ಬರು ನಾಯಕರನ್ನು ನೇಮಕ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಹಠಾತ್ ನಿಧನ: ಸಿಎಂ ಸೇರಿ ರಾಜಕೀಯ ನಾಯಕರ ಸಂತಾಪ, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಈ ನೇಮಕಾತಿಯ ಕುರಿತು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿರುವ ತಿವಾರಿ ಅವರು ಈ ಹಿಂದೆ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಂಸದರಾಗಿದ್ದಾರೆ.
ರಜನಿ ಪಾಟೀಲ್ ಅವರು ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದು, ಪ್ರಸ್ತುತ ಅಶಿಸ್ತಿನ ವರ್ತನೆಗಾಗಿ ಬಜೆಟ್ ಅಧಿವೇಶನದಿಂದ ಅಮಾನತುಗೊಂಡಿದ್ದಾರೆ.