ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್ ನೇತೃತ್ವದಲ್ಲಿ ಜೈಪುರದಲ್ಲಿ 'ತಿರಂಗ ಯಾತ್ರೆ'

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದಲ್ಲಿ ಸೋಮವಾರ ಜೈಪುರದಲ್ಲಿ ಎಎಪಿಯ 'ತಿರಂಗ ಯಾತ್ರೆ' ನಡೆಯಲಿದೆ ಎಂದು ಆಪ್ ನಾಯಕ ವಿನಯ್ ಮಿಶ್ರಾ...
ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಜೊತೆ ಸಿಎಂ ಅರವಿಂದ್ ಕೇಜ್ರಿವಾಲ್
ಪಂಜಾಬ್ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಜೊತೆ ಸಿಎಂ ಅರವಿಂದ್ ಕೇಜ್ರಿವಾಲ್

ಜೈಪುರ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದಲ್ಲಿ ಸೋಮವಾರ ಜೈಪುರದಲ್ಲಿ ಎಎಪಿಯ 'ತಿರಂಗ ಯಾತ್ರೆ' ನಡೆಯಲಿದೆ ಎಂದು ಆಪ್ ನಾಯಕ ವಿನಯ್ ಮಿಶ್ರಾ ಅವರು ಭಾನುವಾರ ಹೇಳಿದ್ದಾರೆ.

ಇಂದು ಜೈಪುರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಿಶ್ರಾ, ತಮ್ಮ ಪಕ್ಷದ ದೆಹಲಿ ಮತ್ತು ಪಂಜಾಬ್ ಮುಖ್ಯಮಂತ್ರಿಗಳು ಈ ಯಾತ್ರೆಯೊಂದಿಗೆ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಈ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಜೈಪುರದ ಸಂಗನೇರಿ ಗೇಟ್‌ನಿಂದ ಅಜ್ಮೇರಿ ಗೇಟ್‌ವರೆಗೆ 'ತಿರಂಗ ಯಾತ್ರೆ'(ತ್ರಿವರ್ಣ ರ್ಯಾಲಿ) ನಡೆಯಲಿದ್ದು, ನಂತರ ದೆಹಲಿ ಸಿಎಂ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಮಾನ್ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ರಾಜಸ್ಥಾನದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ಕಳೆದ 15-20 ದಿನಗಳಲ್ಲಿ ಸುಮಾರು ನಾಲ್ಕೂವರೆ ಲಕ್ಷ ಮಂದಿ ಪಕ್ಷದ ಸದಸ್ಯತ್ವ ಪಡೆದಿದ್ದಾರೆ ಎಂದು ಮಿಶ್ರಾ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com