ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಗೆ ರಾಜೀನಾಮೆ
ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವಿಭಜಿತ ಆಂಧ್ರಪ್ರದೇಶದ ಕೊನೆಯ ಸಿಎಂ ಆಗಿದ್ದು ರೆಡ್ಡಿ, ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವಿವಿಧ ಮಾಧ್ಯಮಗಳ ವರದಿಗಳು ಹೇಳಿವೆ.
Published: 12th March 2023 09:15 PM | Last Updated: 12th March 2023 09:15 PM | A+A A-

ಕಿರಣ್ ಕುಮಾರ್ ರೆಡ್ಡಿ
ನವದೆಹಲಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವಿಭಜಿತ ಆಂಧ್ರಪ್ರದೇಶದ ಕೊನೆಯ ಸಿಎಂ ಆಗಿದ್ದು ರೆಡ್ಡಿ, ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವಿವಿಧ ಮಾಧ್ಯಮಗಳ ವರದಿಗಳು ಹೇಳಿವೆ.
ಒಂದೇ ಸಾಲಿನ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿರುವ ರೆಡ್ಡಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಬರೆದಿದ್ದಾರೆ.
Former Andhra Pradesh CM Kiran Kumar Reddy resigns from the Indian National Congress party pic.twitter.com/0Sdlx0lUtH
— ANI (@ANI) March 12, 2023
ಆಂಧ್ರ ಪ್ರದೇಶ ವಿಭಜನೆಗೆ ವಿರೋಧ ವ್ಯಕ್ತಪಡಿಸಿ 2014ರಲ್ಲಿ ಕಾಂಗ್ರೆಸ್ ತೊರೆದು, ಸಮೈಕ್ಯ ಆಂಧ್ರ ಪಕ್ಷ ಸ್ಥಾಪಿಸಿದ್ದರು. ಆದರೆ, ಒಂದೇ ಒಂದು ಸ್ಥಾನವನ್ನು ಗೆಲ್ಲದ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆದರೆ, ರಾಜ್ಯ ರಾಜಕೀಯದಲ್ಲಿ ಹೆಚ್ಚಾಗಿ ಸಕ್ರಿಯರಾಗಿರಲಿಲ್ಲ. ಕಿರಣ್ ಕುಮಾರ್ ರೆಡ್ಡಿ ಅವರಿಗೆ ರಾಷ್ಟ್ರಮಟ್ಟದಲ್ಲಿ ಬಿಜೆಪಿಯಿಂದ ಉನ್ನತ ಹುದ್ದೆ ದೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ.