'ನನ್ನ ಮಗನಿಗೆ 18 ವರ್ಷ ತುಂಬಿದೆ': ಗರ್ಲ್​ಫ್ರೆಂಡ್​ ಜತೆ ಪುತ್ರನ ಫೋಟೋಗೆ ಉದಯನಿಧಿ ಸ್ಟಾಲಿನ್ ಪ್ರತಿಕ್ರಿಯೆ

ತಮಿಳುನಾಡು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಉದಯನಿಧಿ ಸ್ಟಾಲಿನ್ ಅವರ ಪುತ್ರ ಇನ್ಬನಿತಿ ಅವರು ಗರ್ಲ್​ಫ್ರೆಂಡ್​ ಜತೆ ಇರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉದಯನಿಧಿ...
ಉದಯನಿಧಿ ಸ್ಟಾಲಿನ್
ಉದಯನಿಧಿ ಸ್ಟಾಲಿನ್

ಚೆನ್ನೈ: ತಮಿಳುನಾಡು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಉದಯನಿಧಿ ಸ್ಟಾಲಿನ್ ಅವರ ಪುತ್ರ ಇನ್ಬನಿತಿ ಅವರು ಗರ್ಲ್​ಫ್ರೆಂಡ್​ ಜತೆ ಇರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್ ಅವರು, ತಮ್ಮ ಮಗನಿಗೆ 18 ವರ್ಷ ತುಂಬಿದೆ ಮತ್ತು ಅದು ಅವರ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್  ಅವರ ಪುತ್ರರಾಗಿರುವ ಉದಯನಿಧಿ ಸ್ಟಾಲಿನ್ ಅವರು, ಒಬ್ಬ ಪ್ರಬುದ್ಧ ವ್ಯಕ್ತಿಯ ವೈಯಕ್ತಿಕ ವಿಚಾರಗಳಲ್ಲಿ ಮಧ್ಯಪ್ರವೇಶಿಸಲು ಕೆಲವು ನಿರ್ಬಂಧಗಳಿವೆ ಎಂದು ಭಾನುವಾರ ಹೇಳಿದ್ದಾರೆ.

ನನ್ನ ಪತ್ನಿ ಮತ್ತು ಮಗನ ಜೊತೆ ನಾನು ಏನು ಚರ್ಚೆ ಮಾಡಿದ್ದೇನೆ ಎಂಬುದನ್ನು ನಿಮಗೆ ಬಹಿರಂಗಪಡಿಸಲು ಸಾಧ್ಯವಿಲ್ಲ. ಅದು ನನ್ನ ವೈಯಕ್ತಿಕ ವಿಚಾರ ಎಂದು ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ.

ಜನವರಿಯಲ್ಲಿ ಇನ್ಬನಿತಿ ಮತ್ತು ಅವರ ಗೆಳತಿಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಆದರೆ ಉದಯನಿಧಿ ಅವರು ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಅವರ ಪತ್ನಿ ಕೃತಿಕಾ ಉದಯನಿಧಿ ಟ್ವೀಟ್ ಮಾಡಿ, ಪ್ರೀತಿಸಲು ಮತ್ತು ಪ್ರೀತಿ ವ್ಯಕ್ತಪಡಿಸಲು ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com