ಆರ್ ಎಸ್ಎಸ್ ಕಾರ್ಯಕ್ರಮಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್)ದ ‘ಶಾಖೆ’ಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಡಾ.ಮನಮೋಹನ್ ವೈದ್ಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಣಿಪತ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್)ದ ‘ಶಾಖೆ’ಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಡಾ.ಮನಮೋಹನ್ ವೈದ್ಯ ಅವರು ಭಾನುವಾರ ಹೇಳಿದ್ದಾರೆ.

RSS ಈಗಾಗಲೇ ಮಹಿಳೆಯರಿಗಾಗಿ ರಾಷ್ಟ್ರೀಯ ಸೇವಕ ಸಮಿತಿಯನ್ನು ನಡೆಸುತ್ತಿದ್ದು, ಅದರ ಮೂಲಕ ಮಹಿಳೆಯರು ಸಂಘದೊಂದಿಗೆ ನಂಟು ಹೊಂದಿದ್ದಾರೆ ಎಂದರು.

ಪಾಣಿಪತ್ ಜಿಲ್ಲಾ ವೈದ್ಯ ಸಮಲ್ಖಾದಲ್ಲಿ ಆರ್‌ಎಸ್‌ಎಸ್‌ನ ಮೂರು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ಆರಂಭಕ್ಕೂ ಮುನ್ನ ಮಾತನಾಡಿದ,ವೈದ್ಯ, ಪಾಣಿಪತ್‌ನಲ್ಲಿ ನಡೆಯುವ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಕುರಿತು ಚರ್ಚೆ ನಡೆಯಲಿದೆ ಎಂದರು.

"ರಾಷ್ಟ್ರೀಯ ಸ್ವಯಂಸೇವಕ ಸಂಘವು 2025ರಲ್ಲಿ ಸ್ಥಾಪನೆಯಾಗಿ 100 ವರ್ಷಗಳನ್ನು ಪೂರೈಸಲಿದೆ. 3000 ಜನರ ತಂಡವನ್ನು 'ಶತಾಬ್ದಿ ವರ್ಷ ವಿಸ್ತಾರಕ್' ಎಂದು ಕರೆಯಲಾಗಿದ್ದು, ಅವರು ಸಂಘದ ಕಾರ್ಯವನ್ನು ಜನಸಾಮಾನ್ಯರಿಗೆ ತಿಳಿಸಲಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com