ಜಾತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ ಇಬ್ಬರು ಬಾಲಕಿಯರ ಮೇಲೆ 6 ಯುವಕರಿಂದ ಸಾಮೂಹಿಕ ಅತ್ಯಾಚಾರ
ಆಘಾತಕಾರಿ ಘಟನೆಯೊಂದರಲ್ಲಿ, ಜಿಲ್ಲೆಯ ಹುಸೈಂಗಂಜ್ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
Published: 13th March 2023 02:08 PM | Last Updated: 13th March 2023 05:20 PM | A+A A-

ಸಾಂದರ್ಭಿಕ ಚಿತ್ರ
ಫತೇಪುರ: ಆಘಾತಕಾರಿ ಘಟನೆಯೊಂದರಲ್ಲಿ, ಜಿಲ್ಲೆಯ ಹುಸೈಂಗಂಜ್ ಪೊಲೀಸ್ ವೃತ್ತದ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಆರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಫತೇಪುರ ಎಸ್‌ಪಿ ರಾಜೇಶ್ ಕುಮಾರ್ ಸಿಂಗ್ ಪ್ರಕಾರ, ಎಲ್ಲಾ ಆರು ಯುವಕರನ್ನು ಬಂಧಿಸಲಾಗಿದೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 ಡಿ, 342, 323, 504, 506 ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಮಧ್ಯ ಪ್ರದೇಶ: ಗ್ಯಾಂಗ್ರೇಪ್ ಆರೋಪಿಯ ಮನೆ ಧ್ವಂಸ ಮಾಡಿದ ಮಹಿಳಾ ಪೊಲೀಸ್ ಅಧಿಕಾರಿಗಳು!
ಗ್ರಾಮದ ಜಾತ್ರೆಗೆ ತೆರಳಿ ಬಾಲಕಿಯರು ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸಂತ್ರಸ್ತರ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.