ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸಚಿವರ ಗೈರು ಬಗ್ಗೆ ಅಜಿತ್ ಪವಾರ್ ತರಾಟೆ; ಕ್ಷಮೆಯಾಚಿಸಿದ ಫಡ್ನವಿಸ್

ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಸಚಿವರು ಗೈರುಹಾಜರಾದ ಕಾರಣ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಬುಧವಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅಜಿತ್ ಪವಾರ್
ಅಜಿತ್ ಪವಾರ್

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಸಚಿವರು ಗೈರುಹಾಜರಾದ ಕಾರಣ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಬುಧವಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಸಚಿವರ ಗೈರು ಬಗ್ಗೆ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಕ್ಷಮೆಯಾಚಿಸಿದರು.

ಇಂದು ಬೆಳಗ್ಗೆ 11 ಗಂಟೆಗೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಪ್ರಶ್ನೋತ್ತರ ಕಲಾಪವನ್ನು ಕೈಗೆತ್ತಿಕೊಂಡ ಕೂಡಲೇ ಗರಂ ಆದ ಅಜಿತ್ ಪವಾರ್, ಇಂದಿನ ಕಲಾಪದಲ್ಲಿ 8 ಗಮನ ಸೆಳೆಯುವ ನಿಲುವಳಿ ಸೂಚನೆಗಳನ್ನು ಪಟ್ಟಿ ಮಾಡಲಾಗಿದೆ. ಆದರೆ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಸೂಚನೆಯನ್ನು ಮಾತ್ರ  ಚರ್ಚೆಗೆ ತೆಗೆದುಕೊಳ್ಳಬಹುದು. ಏಕೆಂದರೆ ಪ್ರವಾಸೋದ್ಯಮ ಸಚಿವರನ್ನು ಹೊರತುಪಡಿಸಿ ಉಳಿದ ಯಾವ ಸಚಿವರು ಸದನಕ್ಕೆ ಹಾಜರಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

"ಸಚಿವರು ಕಲಾಪದ ವ್ಯವಹಾರವನ್ನು ಗಂಭೀರವಾಗಿ ಪರಿಗಣಿಸದಿರುವುದು ನಾಚಿಕೆಗೇಡಿನ ಪರಮಾವಧಿ. ಅವರು ಮಂತ್ರಿಯಾಗಲು ಬಯಸುತ್ತಾರೆ. ಆದರೆ ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವುದಿಲ್ಲ. ಸಂಸದೀಯ ವ್ಯವಹಾರಗಳ ಸಚಿವ ಚಂದ್ರಕಾಂತ್ ಪಾಟೀಲ್ ಅವರು ಸಹ ಸದನಕ್ಕೆ ಗೈರುಹಾಜರಾಗಿದ್ದಾರೆ" ಎಂದು ಪವಾರ್ ವಾಗ್ದಾಳಿ ನಡೆಸಿದರು.

ತಮ್ಮ ಸಚಿವರ ಗೈರು ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದ ಫಡ್ನವೀಸ್ ಅವರು, ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚೆಗೆ ಕೈಗೆತ್ತಿಕೊಂಡಾಗ ಎಲ್ಲಾ ಸಚಿವರು ಹಾಜರಿರಬೇಕು ಎಂದು ಸೂಚಿಸಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com