ತಾಯಿಯ ಹೊಟ್ಟೆಯಲ್ಲಿದ್ದ ಮಗುವಿನ ದ್ರಾಕ್ಷಿ ಗಾತ್ರದ ಹೃದಯಕ್ಕೆ ಏಮ್ಸ್‌ ವೈದ್ಯರಿಂದ ಯಶಸ್ವಿ ಶಸ್ತ್ರಚಿಕಿತ್ಸೆ!

ತಾಯಿ ಹೊಟ್ಟೆಯಲ್ಲಿದ್ದ ಮಗುವಿನ ದ್ರಾಕ್ಷಿ ಗಾತ್ರದ ಹೃದಯದ ಶಸ್ತ್ರಚಿಕಿತ್ಸೆಯನ್ನು ದೆಹಲಿಯ ಏಮ್ಸ್‌ ವೈದ್ಯರು ಯಶಸ್ವಿಯಾಗಿ ನೆರವೇರಿಸಿದ್ದಾರೆ.
ಗರ್ಭದಲ್ಲಿರುವ ಮಗುವಿಗೆ ಏಮ್ಸ್ ವೈದ್ಯರಿಂದ ಶಸ್ತ್ರಚಿಕಿತ್ಸೆ
ಗರ್ಭದಲ್ಲಿರುವ ಮಗುವಿಗೆ ಏಮ್ಸ್ ವೈದ್ಯರಿಂದ ಶಸ್ತ್ರಚಿಕಿತ್ಸೆ

ನವದೆಹಲಿ: ತಾಯಿ ಹೊಟ್ಟೆಯಲ್ಲಿದ್ದ ಮಗುವಿನ ದ್ರಾಕ್ಷಿ ಗಾತ್ರದ ಹೃದಯದ ಶಸ್ತ್ರಚಿಕಿತ್ಸೆಯನ್ನು ದೆಹಲಿಯ ಏಮ್ಸ್‌ ವೈದ್ಯರು ಯಶಸ್ವಿಯಾಗಿ ನೆರವೇರಿಸಿದ್ದಾರೆ.

ಮೂರು ಬಾರಿ ಗರ್ಭಪಾತವಾಗಿದ್ದ 28 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಮಗುವಿನ ಹೃದಯದಲ್ಲಿ ಸಮಸ್ಯೆ ಇರುವುದು ಪತ್ತೆಯಾಗಿತ್ತು. ವೈದ್ಯರು ಚಿಕಿತ್ಸೆ ಮೂಲಕ ಮಗುವಿನ ಆರೋಗ್ಯ ಸುಧಾರಣೆ ಸಾಧ್ಯ ಎಂದು ತಿಳಿಸಿದ್ದಾರೆ. ನಂತರ ದಂಪತಿ ಚಿಕಿತ್ಸೆಗೆ ಒಪ್ಪಿದ್ದರು.

ಏಮ್ಸ್‌ನ ಕಾರ್ಡಿಯೋಥೊರಾಸಿಕ್ ಸೈನ್ಸಸ್ ಸೆಂಟರ್‌ನ ತಜ್ಞರ ತಂಡವು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದು, ತಾಯಿ ಹಾಗೂ ಭ್ರೂಣದ ಆರೋಗ್ಯ ಸ್ಥಿರವಾಗಿದೆ. ತಜ್ಞರ ತಂಡವು ತಾಯಿಯ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ವೈದ್ಯರು ಹೇಳಿದ್ದಾರೆ.

ಶಸ್ತ್ರಚಿಕಿತ್ಸೆಯ ನಂತರ ತಾಯಿ ಹಾಗೂ ಗರ್ಭದಲ್ಲಿರುವ ಮಗು ಇಬ್ಬರೂ ಕ್ಷೇಮವಾಗಿದ್ದಾರೆ. ಇಬ್ಬರ ಆರೋಗ್ಯದ ಮೇಲೂ ವೈದ್ಯರ ತಂಡ ನಿಗಾವಹಿಸಿದೆ. ಮಗು ತಾಯಿಯ ಉದರದಲ್ಲಿರುವಾಗಲೇ ಉಂಟಾಗುವ ಕೆಲವು ತೀವ್ರತರದ ಹೃದಯ ಕಾಯಿಲೆಗಳನ್ನು ಶಮನ ಮಾಡಬಹುದು. ಹೊಟ್ಟೆಯಲ್ಲೇ ಅವುಗಳಿಗೆ ಚಿಕಿತ್ಸೆ ನೀಡುವುದರಿಂದ ಜನನದ ಬಳಿಕ ಮಗುವಿನ ಮೇಲ್ನೋಟವು ವೃದ್ಧಿಸುವುದಲ್ಲದೆ, ಸಾಮಾನ್ಯ ಮಗುವಿನಂತೆ ಬೆಳವಣಿಗೆ ಉಂಟಾಗುತ್ತದೆ‘ ಎಂದು ವೈದ್ಯರು ಹೇಳಿದ್ದಾರೆ. ಈ ಪ್ರಕ್ರಿಯೆಯನ್ನು ‘ಬಲೂನ್‌ ಡಿಲೇಷನ್‌‘ ಎಂದು ಕರೆಯಲಾಗುತ್ತದೆ.

ಚಿಕಿತ್ಸೆಯನ್ನು ಅಲ್ಟ್ರಾ ಸೌಂಡ್ ಮೂಲಕವೇ ನಿರ್ವಹಿಸಬೇಕು. ನಿಗದಿತ ಸಮಯದಲ್ಲಿ ಜಾಗರೂಕತೆಯಿಂದ ಚಿಕಿತ್ಸೆ ಮಾಡಿ ಮುಗಿಸಬೇಕು. ಇಲ್ಲವಾದಲ್ಲಿ ಮಗುವಿನ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com