

ಚೆನ್ನೈ: ಐಐಟಿ-ಮದ್ರಾಸ್‌ನ ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ರೂಮ್ ನಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆರೆಯ ಆಂಧ್ರಪ್ರದೇಶ ಮೂಲದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ 20 ವರ್ಷದ ವಿದ್ಯಾರ್ಥಿ, ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ವಿದ್ಯಾರ್ಥಿ ಅಧ್ಯಯನದ ಮೇಲೆ ಕೇಂದ್ರೀಕರಿಸಲು ಮತ್ತು ಶೈಕ್ಷಣಿಕ ಕಾರ್ಯಗಳನ್ನು ಪೂರ್ಣಗೊಳಿಸಲು ವಿಫಲವಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನಿಖೆ ಮತ್ತು ಶವಪರೀಕ್ಷೆ ಪೂರ್ಣಗೊಂಡ ನಂತರವೇ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.
ಫೆಬ್ರವರಿ 14 ರಂದು ಐಐಟಿ ಮದ್ರಾಸ್‌ನಲ್ಲಿ ಇಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಒಂದು ತಿಂಗಳಲ್ಲೇ ಈ ಘಟನೆ ನಡೆದಿದೆ.
Advertisement