ರಾಜಸ್ಥಾನ: ಹಾಸ್ಟೆಲ್ ನಲ್ಲಿ ಬಿಹಾರದ ನೀಟ್ ಆಕಾಂಕ್ಷಿ ನೇಣಿಗೆ ಶರಣು
ಕೋಟಾ(ರಾಜಸ್ಥಾನ): ರಾಜಸ್ಥಾನದ ಕೋಟಾದಲ್ಲಿರುವ ಹಾಸ್ಟೆಲ್ ನ ಕೊಠಡಿಯಲ್ಲಿ ಬಿಹಾರದ 18 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಶೆಂಬುಲ್ ಪರ್ವೀನ್ ಎಂದು ಗುರುತಿಸಲಾಗಿದ್ದು, ಹಾಸ್ಟೆಲ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕಳೆದ ವರ್ಷ ಜೂನ್‌ನಲ್ಲಿ ಬಿಹಾರದ ಪಶ್ಚಿಮ ಚಂಪಾರಣ್‌ನಿಂದ ರಾಜಸ್ಥಾನದ ಕೋಟಾಕ್ಕೆ ಬಂದಿದ್ದ ಪರ್ವೀನ್, ನೀಟ್ ಪರೀಕ್ಷೆಗಾಗಿ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಸೇರಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿಯ ಕೊಠಡಿಯಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗದ ಕಾರಣ ಪೊಲೀಸರು ಈ ಆತ್ಮಹತ್ಯೆಯ ಹಿಂದಿನ ಕಾರಣವನ್ನು ಇನ್ನೂ ಖಚಿತಪಡಿಸಿಲ್ಲ. ಆದಾಗ್ಯೂ, ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ್ದಕ್ಕಾಗಿ ವಿದ್ಯಾರ್ಥಿನಿ ತೀವ್ರ ಬೇಸರಗೊಂಡಿದ್ದಳು ಎಂದು ಆಕೆಯ ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ