ತ್ರಿಪುರಾ: ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಶಾಸಕಿ ಸ್ಥಾನಕ್ಕೆ ರಾಜೀನಾಮೆ
ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಧನಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರು ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Published: 15th March 2023 08:43 PM | Last Updated: 16th March 2023 03:18 PM | A+A A-

ಪ್ರತಿಮಾ ಭೌಮಿಕ್
ಅಗರ್ತಲಾ: ಇತ್ತೀಚೆಗಷ್ಟೇ ಮುಕ್ತಾಯಗೊಂಡ ತ್ರಿಪುರಾ ವಿಧಾನಸಭೆ ಚುನಾವಣೆಯಲ್ಲಿ ಧನಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಅವರು ಬುಧವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
"ನಾನು ಸಂಸದೆ ಮತ್ತು ಕೇಂದ್ರ ಸಚಿವೆಯಾಗಿದ್ದರೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಹೈಕಮಾಂಡ್ ನನಗೆ ಅವಕಾಶ ನೀಡಿತ್ತು. ಆದರೆ ಸಂಸದ ಮತ್ತು ಶಾಸಕನಾಗಿ ಏಕಕಾಲದಲ್ಲಿ ಕೆಲಸ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ. ಹೀಗಾಗಿ ನಾನು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ" ಎಂದು ಭೌಮಿಕ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವೆ ಭೌಮಿಕ್ ಅವರು, ಧನ್‌ಪುರದ ಜನರಿಗೆ ಬಿಜೆಪಿ-ಐಪಿಎಫ್‌ಟಿ ಸರ್ಕಾರ "ಚುನಾವಣೆಗೂ ಮುನ್ನ ನೀಡಿದ ಎಲ್ಲಾ ಭರವಸೆಗಳನ್ನುಈಡೇರಿಸಲಿದೆ" ಎಂದು ಭರವಸೆ ನೀಡಿದರು.
ಇದನ್ನು ಓದಿ: 2ನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣವಚನ
ಭೌಮಿಕ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಹಂಗಾಮಿ ಸ್ಪೀಕರ್ ಬಿನೋಯ್ ಭೂಷಣ್ ದಾಸ್ ಅವರು ತಿಳಿಸಿದ್ದಾರೆ.
ಭೌಮಿಕ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಧನಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಆರು ತಿಂಗಳಲ್ಲಿ ಉಪಚುನಾವಣೆ ನಡೆಯಲಿದೆ.