2022ರಲ್ಲಿ ಐಐಟಿ, ಎನ್‌ಐಟಿ ಮತ್ತು ಐಐಎಂಗಳಲ್ಲಿ 16 ವಿದ್ಯಾರ್ಥಿಗಳು ಆತ್ಮಹತ್ಯೆ

2022ರಲ್ಲಿ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಐಐಟಿಯ ಎಂಟು ವಿದ್ಯಾರ್ಥಿಗಳು ಸೇರಿದಂತೆ ಎನ್ಐಟಿ ಮತ್ತು ಐಐಎಂಗಳಲ್ಲಿ ಒಟ್ಟು 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: 2022ರಲ್ಲಿ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಐಐಟಿಯ ಎಂಟು ವಿದ್ಯಾರ್ಥಿಗಳು ಸೇರಿದಂತೆ ಎನ್ಐಟಿ ಮತ್ತು ಐಐಎಂಗಳಲ್ಲಿ ಒಟ್ಟು 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ವಿದ್ಯಾರ್ಥಿಗಳ ಈ ಸಾವಿಗೆ ಶೈಕ್ಷಣಿಕ ಒತ್ತಡ, ಕೌಟುಂಬಿಕ ಮತ್ತು ವೈಯಕ್ತಿಕ ಕಾರಣಗಳು, ಮಾನಸಿಕ ಆರೋಗ್ಯ ಸಮಸ್ಯೆಗಳು ಕಾರಣ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.

2023 ರಲ್ಲಿ, ಆರು ಪ್ರಕರಣಗಳು ವರದಿಯಾಗಿವೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎನ್‌ಐಟಿ) ಯಿಂದ ತಲಾ ಮೂರು ಪ್ರಕರಣಗಳು ವರದಿಯಾಗಿವೆ.

2019 ರಲ್ಲೂ ಒಟ್ಟು 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಐಐಟಿ ಮತ್ತು ಎನ್‌ಐಟಿಗಳಿಂದ ತಲಾ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು.

2021 ರಲ್ಲಿ, ನಾಲ್ವರು ಐಐಟಿಗ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಏಳು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2020 ರಲ್ಲಿ ಐಐಟಿಯ ಮೂವರು ವಿದ್ಯಾರ್ಥಿಗಳು - ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಡಾ ಸುಭಾಸ್ ಸರ್ಕಾರ್ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com