ಮತ್ತೆ ಕೋವಿಡ್ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿ 6 ರಾಜ್ಯಗಳಿಗೆ ಕೇಂದ್ರ ಪತ್ರ

ದೇಶದಲ್ಲಿ ಮತ್ತೆ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ ಗುರುವಾರ ಪತ್ರ ಬರೆದಿದೆ.

ಕೇಂದ್ರ ಆರೋಗ್ಯ ಸಚಿವಾಲಯ, ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ, ಹೊಸ ಕೋವಿಡ್ -19 ಪ್ರಕರಣಗಳನ್ನು ಮತ್ತು ಕ್ಲಸ್ಟರ್‌ಗಳನ್ನು ಮೇಲ್ವಿಚಾರಣೆ ಮಾಡುವಂತೆ ಮತ್ತು ಎಚ್3ಎನ್ 2 ತರಹದ ಅನಾರೋಗ್ಯ ಮತ್ತು ತೀವ್ರತರವಾದ ಉಸಿರಾಟದ ಸಮಸ್ಯೆ ಇರುವವರ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶಿಸಿದೆ. 

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಆರು ರಾಜ್ಯಗಳಿಗೆ ಪತ್ರ ಬರೆದಿದ್ದು, ಕಳೆದ ಕೆಲವು ತಿಂಗಳುಗಳಲ್ಲಿ ದೇಶದಲ್ಲಿ ಕೋವೊಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಗಮನಾರ್ಹ ಕುಸಿತವಾಗಿತ್ತು. ಆದರೆ. ಕಳೆದ ಕೆಲವು ವಾರಗಳಿಂದ ಮಾರ್ಚ್ 8ಕ್ಕೆ ಕೊನೆಗೊಂಡ ವಾರದಲ್ಲಿ ಒಟ್ಟು 2,082 ಪ್ರಕರಣಗಳು ವರದಿಯಾಗಿದ್ದು, ಮಾರ್ಚ್ 15ಕ್ಕೆ ಕೊನೆಗೊಂಡ ವಾರದಲ್ಲಿ 3,264 ಪ್ರಕರಣಗಳಿಗೆ ಏರಿಕೆಯಾಗಿದ್ದು, ದೇಶದ ಕೆಲವು ಭಾಗಗಳಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ" ಎಂದು ಹೇಳಿದ್ದಾರೆ.

ಕೆಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಸ್ಥಳೀಯವಾಗಿ ಸೋಂಕು ಹರಡಿರುವ ಸಾಧ್ಯತೆ ಇದೆ. ಹೀಗಾಗಿ ಅಪಾಯದ ಮೌಲ್ಯ ಮಾಪನ ಆಧಾರಿತ ವಿಧಾನವನ್ನು ಅನುಸರಿಸಿ, ಈವೆರಗೂ ಸೋಂಕಿನ ವಿರುದ್ಧದ ಹೋರಾಟದಿಂದ ಆದ ಲಾಭವನ್ನು ಕಳೆದುಕೊಳ್ಳದೇ, ಸೋಂಕನ್ನು ನಿಯಂತ್ರಿಸಬೇಕಾಗಿದೆ ಎಂದು ರಾಜೇಶ್ ಭೂಷಣ್ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com