ಭಾರತವನ್ನು ದೂಷಿಸುವವರ ವಿರುದ್ಧ ಜನರು ಧ್ವನಿ ಎತ್ತಬೇಕು: ರಾಹುಲ್ ಗಾಂಧಿ ವಿರುದ್ಧ ಕಿರಣ್ ರಿಜಿಜು ವಾಗ್ದಾಳಿ

ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲಂಡನ್ ಭಾಷಣಕ್ಕಾಗಿ ವಾಗ್ದಾಳಿ ನಡೆಸಿದ್ದು, ಭಾರತವನ್ನು ದೂಷಿಸುವವರ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ.
ಕಿರಣ್ ರಿಜಿಜು
ಕಿರಣ್ ರಿಜಿಜು

ನವದೆಹಲಿ: ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲಂಡನ್ ಭಾಷಣಕ್ಕಾಗಿ ವಾಗ್ದಾಳಿ ನಡೆಸಿದ್ದು, ಭಾರತವನ್ನು ದೂಷಿಸುವವರ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ರಿಜಿಜು, 'ರಾಹುಲ್ ಗಾಂಧಿ ಅವರು ತಮ್ಮ ಲಂಡನ್ ಸೆಮಿನಾರ್‌ನಲ್ಲಿ ಹೇಳಿದ್ದಕ್ಕಾಗಿ ಕ್ಷಮೆಯಾಚಿಸಬೇಕು. ಅವರು ನಮ್ಮ ಪ್ರಜಾಪ್ರಭುತ್ವ, ನ್ಯಾಯಾಂಗ ಮತ್ತು ರಾಷ್ಟ್ರವನ್ನು ಅವಮಾನಿಸಿದ್ದಾರೆ. ನಮ್ಮ ರಾಷ್ಟ್ರದ ವಿರುದ್ಧ ಮಾತನಾಡುವವರ ವಿರುದ್ಧ ನಾವು ಧ್ವನಿ ಎತ್ತಬೇಕು' ಎಂದು ಹೇಳಿದರು.

'ರಾಹುಲ್ ಗಾಂಧಿ ಏನಾದರೂ ಹೇಳಿದರೆ, ಅದರಿಂದ ಕಾಂಗ್ರೆಸ್ ಸಮಸ್ಯೆಗೆ ಸಿಲುಕಿದರೆ ಅದಕ್ಕೂ ನಮಗೂ ಸಂಬಂಧವಿಲ್ಲ. ಆದರೆ, ಅವರು ನಮ್ಮ ದೇಶವನ್ನು ದೂಷಿಸಿದರೆ, ಈ ದೇಶದ ಪ್ರಜೆಗಳಾದ ನಾವು ಸುಮ್ಮನಿರಲು ಸಾಧ್ಯವಿಲ್ಲ' ಎಂದಿದ್ದಾರೆ.

ಇತ್ತೀಚೆಗೆ ಲಂಡನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 'ಭಾರತೀಯ ಪ್ರಜಾಪ್ರಭುತ್ವವು ಒತ್ತಡದಲ್ಲಿದೆ ಮತ್ತು ದಾಳಿಗೆ ಒಳಗಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಮತ್ತು ಸುದ್ದಿಯಾಗಿದೆ. ನಾನು ಭಾರತದಲ್ಲಿ ವಿರೋಧ ಪಕ್ಷದ ನಾಯಕ, ನಾವು ಆ (ವಿರೋಧ) ಜಾಗವನ್ನು ನ್ಯಾವಿಗೇಟ್ ಮಾಡುತ್ತಿದ್ದೇವೆ. ಭಾರತೀಯ ಪ್ರಜಾಪ್ರಭುತ್ವದ ರಚನೆಗಳು ಕ್ರೂರ ದಾಳಿಗೆ ಒಳಗಾಗಿವೆ ಮತ್ತು ದೇಶದ ಸಂಸ್ಥೆಗಳ ಮೇಲೆ ಪೂರ್ಣ ಪ್ರಮಾಣದ ದಾಳಿ ನಡೆದಿದೆ. ಅಮೆರಿಕ ಮತ್ತು ಯುರೋಪ್‌ನಂತಹ ಪ್ರಜಾಸತ್ತಾತ್ಮಕ ರಾಷ್ಟ್ರಗಳು ಇದನ್ನು ಗಮನಿಸುವಲ್ಲಿ ವಿಫಲವಾಗಿವೆ' ಎಂದು ಆರೋಪಿಸಿದ್ದರು.

ಈ ಹೇಳಿಕೆಗಳು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಅವರು ವಿದೇಶಿ ನೆಲದಲ್ಲಿ ಭಾರತವನ್ನು ದೂಷಿಸಿದ್ದಾರೆ ಮತ್ತು ವಿದೇಶಿ ಹಸ್ತಕ್ಷೇಪಗಳನ್ನು ಬಯಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಆಂತರಿಕ ರಾಜಕೀಯವನ್ನು ಎತ್ತುವ ಉದಾಹರಣೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿದೆ.

ವಿವಾದದ ಮಧ್ಯೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಸಂಸತ್ತಿಗೆ ಹಾಜರಾಗಲಿದ್ದು, ಲಂಡನ್‌ನಲ್ಲಿ ಅವರ ಹೇಳಿಕೆಗಳ ವಿವಾದವನ್ನು ಪರಿಹರಿಸುವ ಸಾಧ್ಯತೆಯಿದೆ. ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂಬ ಆಡಳಿತಾರೂಢ ಬಿಜೆಪಿಯ ಕರೆಯನ್ನು ಕಾಂಗ್ರೆಸ್ ತಿರಸ್ಕರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com