ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಮಹಿಳೆಯರು ಸಾವು, ಓರ್ವ ಕಾರ್ಮಿಕನಿಗೆ ಗಂಭೀರ ಗಾಯ

ಧರ್ಮಪುರಿ ಜಿಲ್ಲೆಯ ಪೆನ್ನಾಗರಂನ ನಾಗದಾಸಂಪಟ್ಟಿ ಗ್ರಾಮದ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಮತ್ತು ಪುರುಷ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಧರ್ಮಪುರಿ: ಜಿಲ್ಲೆಯ ಪೆನ್ನಾಗರಂನ ನಾಗದಾಸಂಪಟ್ಟಿ ಗ್ರಾಮದ ಪಟಾಕಿ ತಯಾರಿಕಾ ಘಟಕದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ ಮತ್ತು ಪುರುಷ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇವಸ್ಥಾನದ ಉತ್ಸವಗಳಿಗೆ ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದ ವೇಳೆ,  ಕಾರ್ಮಿಕರು ದಹಿಸುವ ವಸ್ತುವನ್ನು ನಿರ್ವಹಿಸುತ್ತಿದ್ದಾಗ ಘರ್ಷಣೆಯಿಂದ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾಗದಾಸಂಪಟ್ಟಿ ಗ್ರಾಮದ ಕೆ ಮುನಿಯಮ್ಮಾಳ್ (65) ಮತ್ತು ಸೇಲಂನ ಮೇಚೇರಿಯ ಬಿ ಪಳನಿಯಮ್ಮಾಳ್ (50) ಸ್ಥಳದಲ್ಲೇ ಮೃತಪಟ್ಟರೆ, ಮೂರನೇ ಕೆಲಸಗಾರ ಪಿ ಶಿವಲಿಂಗಂಗೆ ಗಂಭೀರ ಸುಟ್ಟ ಗಾಯಗಳಾಗಿವೆ.

ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ದುರಂತದ ಸುದ್ದಿ ಕೇಳಿ ಬೇಸರವಾಗಿದೆ ಎಂದು ಹೇಳಿದ್ದಾರೆ.

'ಅಪಘಾತ ಮತ್ತು ರಕ್ಷಣಾ ಕಾರ್ಯಾಚರಣೆಯ ಜೊತೆಗೆ ಚಿಕಿತ್ಸೆಯ ವಿವರಗಳನ್ನು ನಾನು ಧರ್ಮಪುರಿ ಜಿಲ್ಲಾಧಿಕಾರಿಗಳಿಂದ ಪಡೆದುಕೊಂಡಿದ್ದೇನೆ. ದುಃಖತಪ್ತ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪ' ಎಂದು ಹೇಳಿದ ಅವರು ಸಂತ್ರಸ್ತ ಕುಟುಂಬಕ್ಕೆ ತಲಾ 3 ಲಕ್ಷ ಹಾಗೂ ಗಾಯಗೊಂಡವರಿಗೆ ಒಂದು ಲಕ್ಷ ರೂ. ಘೋಷಿಸಿದ್ದಾರೆ.

ಅಲ್ಲದೆ, ಶಿವಲಿಂಗಂಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ಅಪಘಾತ ಸಂಭವಿಸಿದ ತಕ್ಷಣ ಜಿಲ್ಲಾಧಿಕಾರಿ ಕೆ.ಸಂತಿ ಸ್ಫೋಟ ಸ್ಥಳವನ್ನು ಪರಿಶೀಲನೆ ನಡೆಸಿ, ಪಂಚನಾಮೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com