ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ರಿಯಾಯಿತಿ!

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ ಬಸ್ಸುಗಳಲ್ಲಿ ಇಂದಿನಿಂದ ಮಹಿಳಾ ಪ್ರಯಾಣಿಕರಿಗೆ ಶೇ. 50 ರಷ್ಟು ರಿಯಾಯಿತಿಯನ್ನು ಪ್ರಕಟಿಸಲಾಗಿದೆ. ಮಹಿಳಾ ಸಮ್ಮಾನ್ ಯೋಜನೆಯಡಿ ಈ ಪ್ರಯೋಜನವನ್ನು ಒದಗಿಸಲಿದ್ದು,  ರಾಜ್ಯ ಸರ್ಕಾರ ನಿಗಮಕ್ಕೆ ರಿಯಾಯಿತಿ ಮೊತ್ತವನ್ನು ಮರುಪಾವತಿಸಲಿದೆ ಎಂದು ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 
ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಸಾಂದರ್ಭಿಕ ಚಿತ್ರ
ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಸಾಂದರ್ಭಿಕ ಚಿತ್ರ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ ಬಸ್ಸುಗಳಲ್ಲಿ ಇಂದಿನಿಂದ ಮಹಿಳಾ ಪ್ರಯಾಣಿಕರಿಗೆ ಶೇ. 50 ರಷ್ಟು ರಿಯಾಯಿತಿಯನ್ನು ಪ್ರಕಟಿಸಲಾಗಿದೆ. ಮಹಿಳಾ ಸಮ್ಮಾನ್ ಯೋಜನೆಯಡಿ ಈ ಪ್ರಯೋಜನವನ್ನು ಒದಗಿಸಲಿದ್ದು,  ರಾಜ್ಯ ಸರ್ಕಾರ ನಿಗಮಕ್ಕೆ ರಿಯಾಯಿತಿ ಮೊತ್ತವನ್ನು ಮರುಪಾವತಿಸಲಿದೆ ಎಂದು ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. 

ಮಾರ್ಚ್ 9 ರಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದ ಹಣಕಾಸು ಖಾತೆಯನ್ನು ಹೊಂದಿರುವ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಸಾರ್ವಜನಿಕ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ಶೇಕಡಾ 50 ರಷ್ಟು ರಿಯಾಯಿತಿಯನ್ನು ಘೋಷಿಸಿದ್ದರು.

ಎಂಸಿಆರ್ ಟಿಸಿ ಸುಮಾರು 15,000 ಬಸ್ ಗಳನ್ನು ಹೊಂದಿದ್ದು, ಪ್ರತಿ ದಿನ ಸುಮಾರು 50 ಲಕ್ಷ ಜನರು  ಸಂಚರಿಸುತ್ತಿದ್ದು, ಈಗ ವಿವಿಧ ಸಾಮಾಜಿಕ ಗುಂಪುಗಳಿಗೆ ಟಿಕೆಟ್‌ಗಳ ಮೇಲೆ ಶೇಕಡಾ 33 ರಿಂದ 100 ರಷ್ಟು ರಿಯಾಯಿತಿಗಳನ್ನು ನೀಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಎಲ್ಲಾ ಬಸ್ ಗಳಲ್ಲಿ  75 ವರ್ಷ ಮೇಲ್ಪಟ್ಟ ಹಿರಿಯ ನಾಗಕರಿಗೆ ಶೇ. 100 ರಷ್ಟು ಮತ್ತು 74 ಮತ್ತು 65 ವರ್ಷ ನಡುವಿನ ಪ್ರಯಾಣಿಕರಿಗೆ ಶೇ. 50 ರಷ್ಟು ರಿಯಾಯಿತಿಯನ್ನು ಮಹಾರಾಷ್ಟ್ರ ಸರ್ಕಾರ ಘೋಷಿಸಿತ್ತು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com