ರಾಘವ್ ಚಡ್ಡಾ
ರಾಘವ್ ಚಡ್ಡಾ

ಶಾಸಕರಿಗೆ ಹಣ ನೀಡುವ ಮೂಲಕ ದೆಹಲಿ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಎಎಪಿ

ದೆಹಲಿ ವಿಧಾನಸಭೆಯಲ್ಲಿ ಕೇವಲ ಎಂಟು ಶಾಸಕರನ್ನು ಹೊಂದಿರುವ ಬಿಜೆಪಿ, ಅವಿಶ್ವಾಸ ನಿರ್ಣಯದ ನೆಪದಲ್ಲಿ ಶಾಸಕರಿಗೆ ಹಣ ನೀಡುವ ಮೂಲಕ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.

ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ಕೇವಲ ಎಂಟು ಶಾಸಕರನ್ನು ಹೊಂದಿರುವ ಬಿಜೆಪಿ, ಅವಿಶ್ವಾಸ ನಿರ್ಣಯದ ನೆಪದಲ್ಲಿ ಶಾಸಕರಿಗೆ ಹಣ ನೀಡುವ ಮೂಲಕ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ.

ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಎಪಿಯ ರಾಜ್ಯಸಭಾ ಸಂಸದ ರಾಘವ್ ಚಡ್ಡಾ, 'ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪಕ್ಷದ ಶಾಸಕರಿಗೆ ಎರಡು ಆಯ್ಕೆಗಳನ್ನು ನೀಡುತ್ತಿದೆ. ಒಂದು ಅವರು ಕೇಸರಿ ಪಕ್ಷಕ್ಕೆ ಸೇರಬೇಕು ಅಥವಾ ಸಿಬಿಐ-ಇಡಿ ಅವರನ್ನು ಜೈಲಿಗೆ ಹಾಕುತ್ತದೆ' ಎಂದು ಆರೋಪಿಸಿದರು.

ದೆಹಲಿ ವಿಧಾನಸಭೆಯ ನಡೆಯುತ್ತಿರುವ ಅಧಿವೇಶನದಲ್ಲಿ ಕೇಜ್ರಿವಾಲ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಯೋಜಿಸುತ್ತಿದೆ.

ಎಎಪಿ 62 ಶಾಸಕರನ್ನು ಹೊಂದಿದ್ದು, ಬಿಜೆಪಿಯು ಎಂಟು ಶಾಸಕರನ್ನು ಹೊಂದಿದೆ. ಆದರೆ, ಬಿಜೆಪಿಯು ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಸರ್ಕಾರಗಳು ಬಿದ್ದಂತೆ ಬೀಳಿಸಲು ಅವಿಶ್ವಾಸ ನಿರ್ಣಯದ ನೆಪದಲ್ಲಿ ಶಾಸಕರನ್ನು ಖರೀದಿಸುವ ಮೂಲಕ ಸರ್ಕಾರವನ್ನು ಬೀಳಿಸಲು ಬಯಸುತ್ತಿದೆ ಎಂದು ಹೇಳಿದರು.

ದೆಹಲಿಯಲ್ಲಿ ಚುನಾವಣೆ ನಂತರ ಬಿಜೆಪಿ ಸೋಲುತ್ತಿದ್ದು, ಈಗ ನಮ್ಮ ಶಾಸಕರಿಗೆ 'ನಿಮ್ಮ ಉಪಮುಖ್ಯಮಂತ್ರಿಗೆ ನಾವು ಆ ರೀತಿ ಮಾಡಿದ್ದೀವಿ. ಆದರೆ, ನೀವು ಬರೀ ಎಂಎಲ್ಎ ಅಷ್ಟೇ’ ಎಂದು ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿ ತನ್ನ ನೀಚ ಪ್ರಯತ್ನಗಳನ್ನು ನಿಲ್ಲಿಸಬೇಕು. ಅವರು ಅನೇಕ ಬಾರಿ ಪ್ರಯತ್ನಿಸಿದರು. ಆದರೆ, ನಮ್ಮ ಶಾಸಕರನ್ನು ಸೆಳೆಯಲು ಸಾಧ್ಯವಾಗಲಿಲ್ಲ' ಎಂದು ಆರೋಪಿಸಿದ್ದಾರೆ.

ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನ ಶುಕ್ರವಾರ ಆರಂಭವಾಗಿದೆ.

‘ಭ್ರಷ್ಟಾಚಾರ’ದಲ್ಲಿ ಭಾಗಿಯಾಗಿರುವ ಎಎಪಿ ಸರ್ಕಾರದ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡಿಸಲಿದೆ ಎಂದು ವಿರೋಧ ಪಕ್ಷದ ನಾಯಕ ರಾಮವೀರ್ ಸಿಂಗ್ ಬಿಧುರಿ ಹೇಳಿದ್ದಾರೆ.

2021-22ರ ಅವಧಿಯ ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ಎಎಪಿ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡಿದೆ ಎಂದು ಚಡ್ಡಾ ಬಿಜೆಪಿ ನೇತೃತ್ವದ ಕೇಂದ್ರವನ್ನು ಟೀಕಿಸಿದರು. 

ಕಾಶ್ಮೀರದಲ್ಲಿ ವಾಸಿಸುತ್ತಿರುವ ಬಿಜೆಪಿ ಕಾರ್ಯಕರ್ತ ಕಿರಣ್ ಪಟೇಲ್ ಅವರು ಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಹೆಚ್ಚುವರಿ ನಿರ್ದೇಶಕರಾಗಿದ್ದಾರೆ. ಅವರಿಗೆ 'ಝಡ್-ಪ್ಲಸ್' ಭದ್ರತೆ ನೀಡಲಾಗುತ್ತಿದೆ. ಎರಡು ಜಾಮರ್ ವಾಹನಗಳು, 50 ಗನ್‌ಮೆನ್‌ಗಳು, ಪಂಚತಾರಾ ಹೋಟೆಲ್‌ನಲ್ಲಿ ತಂಗುತ್ತಾರೆ. ಅವರು ಬಿಜೆಪಿ ಕಾರ್ಯಕರ್ತ ಎಂಬ ಕಾರಣಕ್ಕೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿಲ್ಲ. ಆದರೆ, ಸಿಸೋಡಿಯಾ ಅವರನ್ನು ಜೈಲಿಗೆ ಹಾಕಿದ್ದಾರೆ ಎಂದರು.

ಕೇಂದ್ರದಲ್ಲಿ 'ಹೆಚ್ಚುವರಿ ಕಾರ್ಯದರ್ಶಿ' ಎಂದು ಹೇಳಿಕೊಂಡು ಭದ್ರತೆಯನ್ನು ಅನುಭವಿಸಿದ್ದಕ್ಕಾಗಿ ಗುಜರಾತಿನ ಪಟೇಲ್ ಅವರನ್ನು ಶ್ರೀನಗರದ ಪಂಚತಾರಾ ಹೋಟೆಲ್‌ನಿಂದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.

ನ್ಯಾಯಾಲಯದ ದಾಖಲೆಗಳ ಪ್ರಕಾರ, ಪಟೇಲ್ ಅವರು ಕಾಶ್ಮೀರ ಕಣಿವೆಗೆ ಮೂರನೇ ಭೇಟಿಯಲ್ಲಿದ್ದರು ಮತ್ತು ಮಾರ್ಚ್ 3 ರಂದು ಭದ್ರತಾ ಅಧಿಕಾರಿಗಳು ಅವರನ್ನು ಬಂಧಿಸಿದರು.

Related Stories

No stories found.

Advertisement

X
Kannada Prabha
www.kannadaprabha.com