ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಬಸ್ ಪಲ್ಟಿಯಾಗಿ ನಾಲ್ವರು ಸಾವು, 28 ಮಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published: 18th March 2023 12:31 PM | Last Updated: 18th March 2023 12:31 PM | A+A A-

ಪ್ರಾತಿನಿಧಿಕ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಬರ್ಸೂ ಪ್ರದೇಶದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಬಿಹಾರದ ನಿವಾಸಿಗಳಾದ ನಾಲ್ವರು ಪ್ರಯಾಣಿಕರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮಣಿಪುರದ ನೋನಿಯಲ್ಲಿ ಶಾಲಾ ಬಸ್ ಪಲ್ಟಿ; ಐವರು ವಿದ್ಯಾರ್ಥಿಗಳು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ
28 ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 23 ಮಂದಿಯನ್ನು ಚಿಕಿತ್ಸೆಗಾಗಿ ಇಲ್ಲಿನ ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.