ಜಾರ್ಖಂಡ್: ರೈಲ್ವೆ ಹಳಿ ದಾಟುವಾಗ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಸಿಲುಕಿ ಮೂವರು ಸಾವು, ದೇಹದ ಭಾಗಗಳು ಚೆಲ್ಲಾಪಿಲ್ಲಿ
ಜಾರ್ಖಂಡ್‌ನ ಧನ್ಬಾದ್ ರೈಲ್ವೆ ವಿಭಾಗದಲ್ಲಿ ಹಳಿಗಳನ್ನು ದಾಟುತ್ತಿದ್ದಾಗ ಹೌರಾ-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಸಿಲುಕಿ ಮೂವರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Published: 18th March 2023 11:17 AM | Last Updated: 18th March 2023 11:17 AM | A+A A-

ಸಂಗ್ರಹ ಚಿತ್ರ
ಧನ್ಬಾದ್: ಜಾರ್ಖಂಡ್‌ನ ಧನ್ಬಾದ್ ರೈಲ್ವೆ ವಿಭಾಗದಲ್ಲಿ ಹಳಿಗಳನ್ನು ದಾಟುತ್ತಿದ್ದಾಗ ಹೌರಾ-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ಗೆ ಸಿಲುಕಿ ಮೂವರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ನೇತಾಜಿ ಸುಭಾಸ್ ಚಂದ್ರ ಬೋಸ್ ಗೊಮೊಹ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂದು ಆರ್‌ಪಿಎಫ್ ಇನ್ಸ್‌ಪೆಕ್ಟರ್ ವಿಜಯ್ ಶಂಕರ್ ತಿಳಿಸಿದ್ದಾರೆ.
ಪ್ಲಾಟ್‌ಫಾರ್ಮ್ ಸಂಖ್ಯೆ 3 ಅನ್ನು ತಲುಪಲು ಹಳಿಗಳನ್ನು ದಾಟುವಾಗ ವೇಗವಾಗಿ ಬರುತ್ತಿದ್ದ ಹೌರಾ-ನವದೆಹಲಿಯ ರಾಜಧಾನಿ ಎಕ್ಸ್‌ಪ್ರೆಸ್ ಅಡಿ ಸಿಲುಕಿದ್ದಾರೆ. ಈ ರೈಲು ಈ ನಿಲ್ದಾಣದಲ್ಲಿ ನಿಲುಗಡೆಯನ್ನು ಹೊಂದಿರಲಿಲ್ಲ.
ಘರ್ಷಣೆಯ ಪರಿಣಾಮ ದೇಹದ ಭಾಗಗಳು ಸ್ಥಳದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂದು ಅಧಿಕಾರಿ ಹೇಳಿದರು.
'ಮೃತರನ್ನು ಮನೋಜ್ ಸಾಬ್ (19), ಶಿವಚರಣ್ ಸಾಬ್ (20) ಮತ್ತು ಬಬ್ಲೂ ಕುಮಾರ್ (20) ಎಂದು ಗುರುತಿಸಲಾಗಿದೆ. ಅಸನ್ಸೋಲ್-ಗೋಮೊಹ್ ಪ್ಯಾಸೆಂಜರ್ ರೈಲಿನಿಂದ ಫ್ಲಾಟ್‌ಫಾರ್ಮ್ 4ರಲ್ಲಿ ಇಳಿದ ಅವರು, ಪ್ಲಾಟ್‌ಫಾರ್ಮ್ ಸಂಖ್ಯೆ 3 ಅನ್ನು ತಲುಪಲು ಹಳಿಗಳನ್ನು ದಾಟುತ್ತಿದ್ದರು. ಶನಿವಾರ ಮುಂಜಾನೆ ಅವರ ಸಂಬಂಧಿಕರು ಬಟ್ಟೆಗಳ ಆಧಾರದ ಮೇಲೆ ಅವರನ್ನು ಗುರುತಿಸಿದ್ದಾರೆ' ಎಂದು ಅವರು ಹೇಳಿದರು.
ದೇಹದ ಭಾಗಗಳನ್ನು ಸಂಗ್ರಹಿಸುವುದಕ್ಕಾಗಿ ಆ ಮಾರ್ಗದಲ್ಲಿ ಕೆಲಕಾಲ ರೈಲು ಸಂಚಾರವನ್ನು ನಿಲ್ಲಿಸಲಾಯಿತು ಮತ್ತು ಸೀಲ್ದಾ-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ಮತ್ತು ಹಲವಾರು ಇತರ ರೈಲುಗಳನ್ನು ಡೌನ್ ಲೈನ್ ಮೂಲಕ ಹಾದು ಹೋದವು.
ಶಿವಚರಣ್ ಮತ್ತು ಬಬ್ಲೂ ಕುಮಾರ್ ಧನ್ಬಾದ್‌ನಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಅವರು ಸದಾನಂದ ಮೇಳದಲ್ಲಿ ಪಾಲ್ಗೊಳ್ಳಲು ಗೊಮೊಹ್‌ಗೆ ಹೋಗಿದ್ದರು.