ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೆ: ನೋಟಿಸ್ ಬಳಿಕ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ!
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾರಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದಾರೆ.
Published: 19th March 2023 12:40 PM | Last Updated: 19th March 2023 12:40 PM | A+A A-

ರಾಹುಲ್ ಗಾಂಧಿ ನಿವಾಸದ ಹೊರಗೆ ನಿಂತಿರುವ ಪೊಲೀಸರು.
ನವದೆಹಲಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿವಾರಕ್ಕೆ ದೆಹಲಿ ಪೊಲೀಸರು ಭಾನುವಾರ ಭೇಟಿ ನೀಡಿದ್ದಾರೆ.
ಜನವರಿಯಲ್ಲಿ ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ವಿವರಗಳನ್ನು ಕೋರಿ ದೆಹಲಿ ಪೊಲೀಸರು ಬುಧವಾರ ಕಾಂಗ್ರೆಸ್ ನಾಯಕನಿಗೆ ನೋಟಿಸ್ ಜಾರಿ ಮಾಡಿದ್ದರು.
ಭಾರತ್ ಜೋಡೋ ಯಾತ್ರೆ ವೇಳೆ ‘ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯರ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ನೋಟಿಸ್ ನೀಡಲು ಹೋಗಿದ್ದ ದೆಹಲಿ ಪೊಲೀಸರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬರೋಬ್ಬರಿ ಮೂರು ಗಂಟೆ ಕಾಯುವಂತೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಮೂರು ಗಂಟೆ ಕಾದರೂ ಪೊಲೀಸ್ ತಂಡವನ್ನು ರಾಹುಲ್ ಗಾಂಧಿ ಭೇಟಿ ಮಾಡಿರಲಿಲ್ಲ. ನಂತರ ವೈಯಕ್ತಿಕವಾಗಿ ರಾಹುಲ್ ಗಾಂಧಿ ನೋಟಿಸ್ ಸ್ವೀಕರಿಸರು ಎನ್ನಲಾಗಿದೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಒಂದು ನಿರ್ದಿಷ್ಟ ಪ್ರಕರಣದಲ್ಲಿ ಒಬ್ಬ ಹುಡುಗಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಳಲು ತೋಡಿಕೊಂಡಳು. ಆ ಸಂದರ್ಭದಲ್ಲಿ ನಾನು ಪೊಲೀಸರಿಗೆ ಕರೆ ಮಾಡಬೇಕೇ ಎಂದು ಪ್ರಶ್ನಿಸಿದೆ. ಆದರೆ ಪೊಲೀಸರಿಗೆ ಕರೆ ಮಾಡಬೇಡಿ. ಅದರಿಂದ ನನಗೆ ಅವಮಾನವಾಗುತ್ತದೆ ಎಂದು ಆಕೆ ಹೇಳಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದರು.