ದೆಹಲಿಯಲ್ಲಿ ಆಘಾತಕಾರಿ ಘಟನೆ: ಯುವತಿಗೆ ಥಳಿಸಿ, ಕುತ್ತಿಗೆ ಹಿಡಿದು ಬಲವಂತವಾಗಿ ಕ್ಯಾಬ್‌ನಲ್ಲಿ ಕೂರಿಸಿದ ಯುವಕ, ವಿಡಿಯೋ

ದೆಹಲಿಯ ಮಂಗೋಲ್‌ಪುರಿ ಪ್ರದೇಶದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದ್ದು, ಇದರಲ್ಲಿ ಯುವಕರು ಯುವತಿಗೆ ಥಳಿಸಿ ನಂತರ ಬಲವಂತವಾಗಿ ಕ್ಯಾಬ್‌ನಲ್ಲಿ ಕೂರುವಂತೆ ಮಾಡುತ್ತಿದ್ದಾರೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ

ನವದೆಹಲಿ: ದೆಹಲಿಯ ಮಂಗೋಲ್‌ಪುರಿ ಪ್ರದೇಶದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದ್ದು, ಇದರಲ್ಲಿ ಯುವಕರು ಯುವತಿಗೆ ಥಳಿಸಿ ನಂತರ ಬಲವಂತವಾಗಿ ಕ್ಯಾಬ್‌ನಲ್ಲಿ ಕೂರುವಂತೆ ಮಾಡುತ್ತಿದ್ದಾರೆ.

ಈ ವಿಡಿಯೋವನ್ನು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ದೆಹಲಿ ಪೊಲೀಸರನ್ನು ಟ್ಯಾಗ್ ಮಾಡಿದ್ದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿದ್ದಾರೆ. ಈ ವೈರಲ್ ವಿಡಿಯೋ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಹೇಳಿದ್ದಾರೆ. ಅಲ್ಲದೆ ಕ್ಯಾಬ್‌ನ ಮಾಲೀಕ ಗುರುಗ್ರಾಮ್‌ನ ವಿಳಾಸವನ್ನು ಪತ್ತೆಯಾಗಿದ್ದು ಅಲ್ಲಿಗೆ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ ಎಂದಿದ್ದಾರೆ.

ಈ ದೃಶ್ಯ ಶನಿವಾರ ತಡರಾತ್ರಿ 11:30 ರ ಸುಮಾರಿಗೆ ಗುರುಗ್ರಾಮ್‌ನ IFFCO ಚೌಕ್‌ನಲ್ಲಿ ಕಾಣಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿ ಪೊಲೀಸರಿಗೆ ಸಿಕ್ಕಿದ್ದು ತನಿಖೆಗೆ ಕೈಗೊಂಡಿದ್ದಾರೆ.

ವೀಡಿಯೊದಲ್ಲಿ ಕಾಣುತ್ತಿರುವ ಇಬ್ಬರು ಯುವಕರು ಯುವತಿಯನ್ನು ಎಲ್ಲಿಗೆ ಕರೆದುಕೊಂಡು ಹೋದರು ಎಂದು ತಿಳಿಯಲು ಪೊಲೀಸರು ಈ ಉಬರ್ ಕ್ಯಾಬ್‌ನ ಚಾಲಕನನ್ನು ಆದಷ್ಟು ಬೇಗ ತಲುಪಲು ಪ್ರಯತ್ನಿಸುತ್ತಿದ್ದಾರೆ.

ಆದರೆ, ಇದುವರೆಗಿನ ತನಿಖೆಯಲ್ಲಿ ಯುವತಿ ಹಾಗೂ ಇಬ್ಬರು ಹುಡುಗರ ನಡುವೆ ಜಗಳ ನಡೆದು ಚಾಲಕ ಕ್ಯಾಬ್‌ನಿಂದ ಕೆಳಗಿಳಿಸಿರುವುದು ಕೂಡ ಬೆಳಕಿಗೆ ಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com