ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ, ಪ್ರಶ್ನಿಸಿದ ಮಹಿಳೆಯನ್ನು ಥಳಿಸಿದ ಬಿಎಸ್‌ಎಫ್ ನಿವೃತ್ತ ಯೋಧ

ತನ್ನ ಎರಡು ವರ್ಷದ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನಿವೃತ್ತ ಯೋಧರೊಬ್ಬರು ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ನಾಗ್ಪುರ: ತನ್ನ ಎರಡು ವರ್ಷದ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನಿವೃತ್ತ ಯೋಧರೊಬ್ಬರು ಸಾರ್ವಜನಿಕವಾಗಿ ಥಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಶಿವಶಂಕರ್ ಶ್ರೀವಾಸ್ತವ ಎಂದು ಗುರುತಿಸಲಾಗಿದ್ದು, ಆತನ ಮೇಲೆ ಕಿರುಕುಳ ಮತ್ತು ಹಲ್ಲೆ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಶುಕ್ರವಾರ ಮಧ್ಯಾಹ್ನ ಜರಿಪಟ್ಕಾ ಪ್ರದೇಶದ ಭೀಮ್ ಚೌಕ್‌ನಲ್ಲಿ ಶ್ರೀವಾಸ್ತವ್ ಅವರ ಕಾರು ಮಹಿಳೆಯ ದ್ವಿಚಕ್ರ ವಾಹನವನ್ನು ಹಿಂದಿನಿಂದ ತಳ್ಳಿದ ನಂತರ ಈ ಘಟನೆ ಸಂಭವಿಸಿದೆ.

ಈ ವೇಳೆ ಮಹಿಳೆ ಹೇಗೋ ತನ್ನ ಸ್ಕೂಟರ್ ಅನ್ನು ನಿಯಂತ್ರಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದ್ವಿಚಕ್ರ ವಾಹನ ನಿಲ್ಲಿಸಿ ಕಾರಿನ ಚಿತ್ರವನ್ನು ಕ್ಲಿಕ್ಕಿಸಿದ್ದಾರೆ. ಬಳಿಕ, ಕಾರು ಚಲಿಸದಂತೆ ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಶ್ರೀವಾಸ್ತವ್ ಕೋಪಗೊಂಡು ಕಾರಿನಿಂದ ಇಳಿದಿದ್ದಾರೆ. ಬಳಿಕ, ಮಹಿಳೆಯನ್ನು ನಿರ್ದಯವಾಗಿ ಥಳಿಸಲು ಪ್ರಾರಂಭಿಸಿದ್ದಾರೆ. ಇತರ ಜನರು ಸ್ಥಳಕ್ಕೆ ಧಾವಿಸಿ ವ್ಯಕ್ತಿಯನ್ನು ತಡೆದಿದ್ದಾರೆ ಎಂದು ಅಧಿಕಾರಿ ಹೇಳಿದರು.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶ್ರೀವಾಸ್ತವ್ ಅವರನ್ನು ಠಾಣೆಗೆ ಕರೆದೊಯ್ದು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

ಆರೋಪಿಯು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವುದಾಗಿ ಆತನ ಸಂಬಂಧಿಕರು ಪೊಲೀಸರಿಗೆ ತಿಳಿಸಿದ ನಂತರ ಪೊಲೀಸರು ನೋಟಿಸ್‌ನೊಂದಿಗೆ ಬಿಡುಗಡೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com