ಲೈಂಗಿಕ ದೌರ್ಜನ್ಯ ಸಂತ್ರಸ್ತರ ವಿವರ ನೀಡಲು ಸಮಯಾವಕಾಶ ಕೇಳಿದ ರಾಹುಲ್- ದೆಹಲಿ ಪೊಲೀಸರು
ಭಾರತ್ ಜೋಡೋ ಯಾತ್ರೆ ವೇಳೆ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ನೀಡಿದ ನೋಟಿಸ್‌ಗೆ ಸಂಬಂಧಿಸಿದಂತೆ ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಭಾನುವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.
Published: 19th March 2023 05:49 PM | Last Updated: 19th March 2023 05:52 PM | A+A A-

ರಾಹುಲ್ ಗಾಂಧಿ, ಪೊಲೀಸ್ ಅಧಿಕಾರಿ ಸಾಗರ್ ಪ್ರೀತ್ ಹೂಡಾ
ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ಮಾಡಿದ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ನೀಡಿದ ನೋಟಿಸ್‌ಗೆ ಸಂಬಂಧಿಸಿದಂತೆ ವಿಶೇಷ ಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಭಾನುವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು.
ಭಾನುವಾರ ಮುಂಜಾನೆ ರಾಹುಲ್ ಗಾಂಧಿ ನಿವಾಸಕ್ಕೆ ಆಗಮಿಸಿದ ಹೂಡಾ ಭಾರತ್ ಜೋಡೋ ಯಾತ್ರೆಯ ವೇಳೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಲೈಂಗಿಕ ಕಿರುಕುಳ ಸಂತ್ರಸ್ತರ ಬಗ್ಗೆ ವಿವರ ಕೇಳಿದರು.
#WATCH | Special CP(L&O) Dr Sagar Preet Hooda says he along with his team met Congress MP Rahul Gandhi at his Delhi residence today & urged him to provide information on the 'sexual harassment' victims whom he mentioned in his speech during the Bharat Jodo Yatra pic.twitter.com/k9Bd2pmQij
— ANI (@ANI) March 19, 2023
ಇದನ್ನೂ ಓದಿ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತು ಹೇಳಿಕೆ: ನೋಟಿಸ್ ಬಳಿಕ ರಾಹುಲ್ ಗಾಂಧಿ ನಿವಾಸಕ್ಕೆ ಪೊಲೀಸರ ಭೇಟಿ!
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿ, ರಾಹುಲ್ ಗಾಂಧಿಯವರೊಂದಿಗೆ ಮಾತನಾಡಿದ್ದೇವೆ. ಸ್ವಲ್ಪ ಸಮಯ ಬೇಕು ಎಂದಿದ್ದಾರೆ. ನಾವು ನೀಡಲಾದ ನೋಟಿಸ್ ನ್ನು ಅವರ ಕಚೇರಿಯಿಂದ ಇಂದು ಸ್ವೀಕರಿಸಲಾಗಿದೆ. ವಿಚಾರಣೆಯ ಅಗತ್ಯವಾದರೆ ನಂತರ ಮಾಡುತ್ತೇವೆ ಎಂದು ಹೂಡಾ ಹೇಳಿದರು.
ಭಾರತ್ ಜೋಡೋ ಯಾತ್ರೆ ಸುದೀರ್ಘ ಯಾತ್ರೆಯಾಗಿತ್ತು. ಅನೇಕ ಜನರನ್ನು ಭೇಟಿಯಾಗಿದ್ದು, ಅದನ್ನು ಸಂಕಲಿಸಲು ಸಮಯ ಬೇಕಾಗುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಶೀಘ್ರದಲ್ಲೇ ಮಾಹಿತಿ ನೀಡುವುದಾಗಿ ಅವರು ನಮಗೆ ಭರವಸೆ ನೀಡಿದ್ದಾರೆ ಮತ್ತು ಮಾಹಿತಿ ಪಡೆದ ತಕ್ಷಣ ಮುಂದಿನ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.