ದೆಹಲಿಯ ಮೆಟ್ರೋ ನಿರ್ಮಾಣ ಸ್ಥಳದ ಬಳಿ ಮಹಿಳೆಯ ಕತ್ತರಿಸಿದ ದೇಹದ ಭಾಗಗಳು ಪತ್ತೆ!
ದೆಹಲಿ ಪೊಲೀಸರು ಮಹಿಳೆಯ ತಲೆಬುರುಡೆ ಸೇರಿದಂತೆ ವಿರೂಪಗೊಂಡ ದೇಹದ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ರಾಷ್ಟ್ರ ರಾಜಧಾನಿಯ ಮೆಟ್ರೋ ನಿರ್ಮಾಣ ಸ್ಥಳದ ಬಳಿ ಎಸೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
Published: 19th March 2023 02:21 PM | Last Updated: 19th March 2023 02:21 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೆಹಲಿ ಪೊಲೀಸರು ಮಹಿಳೆಯ ತಲೆಬುರುಡೆ ಸೇರಿದಂತೆ ವಿರೂಪಗೊಂಡ ದೇಹದ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ರಾಷ್ಟ್ರ ರಾಜಧಾನಿಯ ಮೆಟ್ರೋ ನಿರ್ಮಾಣ ಸ್ಥಳದ ಬಳಿ ಎಸೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಅಧಿಕಾರಿಯ ಪ್ರಕಾರ, ಶನಿವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ರಾಪಿಡ್ ಮೆಟ್ರೋದ ನಿರ್ಮಾಣ ಹಂತದ ಪ್ರದೇಶದಲ್ಲಿ ಸರೈ ಕಾಲೇ ಖಾನ್ ಐಎಸ್‌ಬಿಟಿ ಬಳಿ ಪತ್ತೆಯಾದ ಮಾನವ ದೇಹದ ಭಾಗಗಳ ಬಗ್ಗೆ ಸನ್‌ಲೈಟ್ ಕಾಲೋನಿ ಪೊಲೀಸ್ ಠಾಣೆಗೆ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕಾಗಮಿಸಿದಾಗ, ಕೊಳೆತ ಮಾನವ ದೇಹದ ಕೆಲವು ಭಾಗಗಳು ಮತ್ತು ಒಂದು ಗೊಂಚಲು ಕೂದಲು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದೆ ಎಂದು ದೆಹಲಿ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಪೊಲೀಸ್ ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಅಪರಾಧ ತಂಡವು ಸ್ಥಳವನ್ನು ಪರಿಶೀಲಿಸಿದೆ. ಪತ್ತೆಯಾದ ಭಾಗಗಳನ್ನು ಮುಂದಿನ ಕ್ರಮಕ್ಕಾಗಿ ಏಮ್ಸ್ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪತ್ತೆಯಾದ ಛಿದ್ರಗೊಂಡ ಮೃತದೇಹದ ಗುರುತು ಪತ್ತೆ ಹಚ್ಚಲು ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಗಮನಾರ್ಹವಾಗಿ, ದೆಹಲಿಯು ಕಳೆದ ವರ್ಷ ಇದೇ ರೀತಿಯ ಎರಡು ಘಟನೆಗಳಿಗೆ ಸಾಕ್ಷಿಯಾಗಿದೆ. ಒಂದು ಅಫ್ತಾಬ್ ಅಮೀನ್ ಪೂನಾವಾಲಾ ಶ್ರದ್ಧಾ ಲೈವ್-ಇನ್ ಪಾರ್ಟ್ನರ್ ಆಗಿದ್ದ ಶ್ರದ್ಧಾ ವಾಕರ್ ಹತ್ಯೆ ಮಾಡಿ, ಆಕೆಯ ದೇಹವನ್ನು ಹಲವಾರು ತುಂಡುಗಳಾಗಿ ಕತ್ತರಿಸಿ ನಂತರ ನಗರದ ವಿವಿಧ ಸ್ಥಳಗಳಲ್ಲಿ ಎಸೆದಿದ್ದನು.
ಎರಡನೇ ಪ್ರಕರಣವು ಪೂರ್ವ ದೆಹಲಿಯ ಪಾಂಡವ್ ನಗರ ಪ್ರದೇಶದಿಂದ ವರದಿಯಾಗಿದ್ದು, ಲ್ಲಿ 48 ವರ್ಷದ ವ್ಯಕ್ತಿಯನ್ನು ಆತನ ಹೆಂಡತಿ ಮತ್ತು ಮಲಮಗನು ಕೊಲೆ ಮಾಡಿದ್ದಾರೆ. ಬಳಿಕ ದೇಹವನ್ನು ಹನ್ನೆರಡು ತುಂಡುಗಳಾಗಿ ಕತ್ತರಿಸಿ ನಂತರ ಕ್ರಮೇಣ ನಗರದ ನಿರ್ಜನ ಸ್ಥಳದಲ್ಲಿ ವಿಲೇವಾರಿ ಮಾಡಿದ್ದರು.