ದೆಹಲಿ ಅಬಕಾರಿ ಹಗರಣ ಪ್ರಕರಣ: 10 ಗಂಟೆಗಳ ಕಾಲ ವಿಚಾರಣೆ ಬಳಿಕ ಕವಿತಾಗೆ ಇಡಿಯಿಂದ ಮತ್ತೆ ಸಮನ್ಸ್ ಜಾರಿ
ದೆಹಲಿಯ ಹಿಂದಿನ ಅಬಕಾರಿ ನೀತಿಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ 10 ಗಂಟೆಗಳ ವಿಚಾರಣೆ ನಡೆಸಿದ ಬಳಿಕವೂ ಬಿಆರ್'ಎಸ್ ಶಾಸಕಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
Published: 21st March 2023 09:04 AM | Last Updated: 21st March 2023 06:34 PM | A+A A-

ಸೋಮವಾರ 10 ಗಂಟೆಗೂ ಹೆಚ್ಚು ಕಾಲ ವಿಚಾರಣೆಗೊಳಗಾದ ಬಳಿಕ ಕವಿತಾ ಅವರು ಇಡಿ ಕಚೇರಿಯಿಂದ ನಿರ್ಗಮಿಸುತ್ತಿರುವುದು.
ನವದೆಹಲಿ: ದೆಹಲಿಯ ಹಿಂದಿನ ಅಬಕಾರಿ ನೀತಿಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ 10 ಗಂಟೆಗಳ ವಿಚಾರಣೆ ನಡೆಸಿದ ಬಳಿಕವೂ ಬಿಆರ್'ಎಸ್ ಶಾಸಕಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ನಿನ್ನೆ ಬೆಳಿಗ್ಗೆ 10.30ಕ್ಕೆ ಕವಿತಾ ಅವರು ದೆಹಲಿ ಕಚೇರಿಗೆ ಆಗಮಿಸಿದ್ದು, ಈ ವೇಳೆ ವಿಚಾರಣೆ ಆರಂಭಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾತ್ರಿ 9.15ಕ್ಕೆ ಮುಕ್ತಾಯಗೊಳಿಸಿದರು. ವಿಚಾರಣೆ ಬಳಿಕ ಕಚೇರಿಯಿಂದ ಕವಿತಾ ಅವರು ವಿಜಯ ಚಿಹ್ನೆಯನ್ನು ತೋರಿಸುತ್ತಾ ಹೊರಬಂದು ಇಡಿ ಕಚೇರಿಯಿಂದ ನಿರ್ಗಮಿಸಿದರು.
ಇದೀಗ ಮರಳಿ ವಿಚಾರಣೆಗೆ ಹಾಜರಾಗುವಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದು, ಇಂದೂ ಕೂಡ ಕವಿತಾ ಅವರು ವಿಚಾರಣೆಗೆ ಹಾಜರಾಗಬೇಕಿದೆ.
ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ: ಮತ್ತಷ್ಟು ವಿಚಾರಣೆಗೆ ಇಡಿ ಮುಂದೆ ಹಾಜರಾದ ಬಿಆರ್ ಎಸ್ ನಾಯಕಿ ಕವಿತಾ
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರನ್ನು ಮಾರ್ಚ್ 11 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸುಮಾರು ಒಂಬತ್ತು ಗಂಟೆಗಳ ಕಾಲ ಮೊದಲು ವಿಚಾರಣೆ ನಡೆಸಿದ್ದರು.
ನಂತರ ಮಾರ್ಚ್ 16 ರಂದು ಅವರಿಗೆ ಮತ್ತೆ ಸಮನ್ಸ್ ಮಾಡಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅರ್ಜಿಯನ್ನು ಉಲ್ಲೇಖಿಸಿ ವಿಚಾರಣೆಯಿಂದ ಹೊರಗುಳಿದಿದ್ದರು. ಈ ಮನವಿಯನ್ನು ತಿರಸ್ಕರಿಸಿದ್ದ ಇಡಿ ಅಧಿಕಾರಿಗಳು ಮಾರ್ಚ 20 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ನಡುವೆ ಕವಿತಾ ಅವರ ಅರ್ಜಿಗಳನ್ನು ಸುಪ್ರೀಂಕೋರ್ಟ್ ಮಾರ್ಚ್ 24ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.