ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ: ಉತ್ತರ ಭಾರತದಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆ ದಾಖಲು
ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಇದರ ಬೆನ್ನಲ್ಲೇ ಉತ್ತರ ಭಾರತದಲ್ಲೂ 5.5 ತೀವ್ರತೆಯ ಭೂಕಂಪನ ಸಂಭವಿಸಿದೆ.
Published: 21st March 2023 11:41 PM | Last Updated: 21st March 2023 11:41 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಆಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಇದರ ಬೆನ್ನಲ್ಲೇ ಉತ್ತರ ಭಾರತದಲ್ಲೂ 5.5 ತೀವ್ರತೆಯ ಭೂಕಂಪನ ಸಂಭವಿಸಿದೆ.
ಅಫ್ಘಾನಿಸ್ತಾನದಲ್ಲಿ ಇಂದು ಭಾರಿ ಭೂಕಂಪ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆ ದಾಖಲಾಗಿದೆ. ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಇಂದು 6.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಈ ಪ್ರಬಲ ಕಂಪನದ ಬೆನ್ನಲ್ಲೇ ಪಾಕಿಸ್ತಾನ ಮತ್ತು ಉತ್ತರ ಭಾರತದಲ್ಲೂ ಕಂಪನ ಸಂಭವಿಸಿದೆ.
ಇದನ್ನೂ ಓದಿ: ಅಂಡಮಾನ್, ನಿಕೋಬಾರ್ ದ್ವೀಪದಲ್ಲಿ ಭೂಕಂಪ
ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ ಇಂದು 6.6 ತೀವ್ರತೆಯ ಭೂಕಂಪ ಸಂಭವಿಸಿದೆ. ಉತ್ತರ ಭಾರತ ಮತ್ತು ಪಾಕಿಸ್ತಾನದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ. ಆದರೆ ಯಾವುದೇ ಸಾವು ನೋವಿನ ಬಗ್ಗೆ ಇನ್ನೂ ವರದಿಯಾಗಿಲ್ಲ. ದೆಹಲಿ-ಎನ್‌ಸಿಆರ್ ಸೇರಿದಂತೆ ಇಡೀ ಉತ್ತರ ಭಾರತದಲ್ಲಿ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 6.6 ಇತ್ತು. ಮಾಹಿತಿಯ ಪ್ರಕಾರ, ಈ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿತ್ತು. ಪಾಕಿಸ್ತಾನದ ಇಸ್ಲಾಮಾಬಾದ್, ಲಾಹೋರ್ ಮತ್ತು ಪೇಶಾವರದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ.
#WATCH | Punjab: People rush out of their houses to open space as several parts of north India experiences strong tremors of earthquake.
— ANI (@ANI) March 21, 2023
Visuals from Bathinda. pic.twitter.com/js44tjqnGc
ಭೂಕಂಪನ ಮಾಪನ ಅಧಿಕಾರಿಗಳ ಪ್ರಕಾರ, ರಾತ್ರಿ 10:17 ಕ್ಕೆ ಅಫ್ಘಾನಿಸ್ತಾನದ ಕಲಾಫ್ಗನ್‌ನಿಂದ 90 ಕಿಮೀ ದೂರದಲ್ಲಿ ಕಂಪನದ ಅನುಭವವಾಗಿದೆ. ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಸೆಂಟರ್ (ಎನ್‌ಎಸ್‌ಎಂಸಿ) ಪ್ರಕಾರ, ಇದುವರೆಗೆ ಯಾವುದೇ ಜೀವ ಅಥವಾ ಆಸ್ತಿ ನಷ್ಟದ ಸುದ್ದಿ ಇಲ್ಲ. ಇಸ್ಲಾಮಾಬಾದ್‌ನ ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ಅಫ್ಘಾನಿಸ್ತಾನದಲ್ಲಿ ಭೂಕಂಪದ ತೀವ್ರ ಕಂಪನವನ್ನು ಅನುಭವಿಸಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: 21 ನಿಮಿಷಗಳ ಅಂತರದಲ್ಲಿ 3 ಭೂಕಂಪನ: ಬೆಚ್ಚಿಬಿದ್ದ ಉತ್ತರಕಾಶಿ
ಉತ್ತರಾಖಂಡದ ಉತ್ತರಕಾಶಿಯಲ್ಲಿ ಲಘು ಭೂಕಂಪನದ ಅನುಭವವಾಗಿದೆ. ಇದಲ್ಲದೆ, ಚಮೋಲಿ, ಉತ್ತರಕಾಶಿಯ ಗಂಗಾ ಕಣಿವೆ, ಯಮುನಾ ಕಣಿವೆ,ಪಂಜಾಬ್‌ನ ಮಸ್ಸೂರಿ, ಮೊಗಾ, ಬಟಿಂಡಾ, ಮಾನ್ಸಾ, ಪಠಾಣ್‌ಕೋಟ್, ಉತ್ತರ ಪ್ರದೇಶದ ಮೊರಾದಾಬಾದ್, ಸಹರಾನ್‌ಪುರ, ಶಾಮ್ಲಿ ಮತ್ತು ಜೈಪುರದಲ್ಲಿ ಭೂಕಂಪನದ ಅನುಭವವಾಗಿದೆ.