ಅಬಕಾರಿ ನೀತಿ ಪ್ರಕರಣ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
Published: 22nd March 2023 05:59 PM | Last Updated: 22nd March 2023 05:59 PM | A+A A-

ಮನೀಶ್ ಸಿಸೋಡಿಯಾ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ವಿಶೇಷ ನ್ಯಾಯಾಧೀಶ ಎಂಕೆ ನಾಗ್‌ಪಾಲ್ ಅವರು ಹಿರಿಯ ಎಎಪಿ ನಾಯಕನನ್ನು ಏಪ್ರಿಲ್ 5 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು, ಪ್ರಕರಣದ ಕಸ್ಟಡಿ ವಿಚಾರಣೆಯ ಮುಗಿದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಹಾಜರುಪಡಿಸಿತ್ತು.
ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಿಸೋಡಿಯಾ ಅವರನ್ನು ಏಳು ದಿನಗಳ ಕಾಲ ತನ್ನ ಕಸ್ಟಡಿಯಲ್ಲಿ ವಿಚಾರಣೆ ನಡೆಸಿತ್ತು. ಸಿಬಿಐ ತನಿಖೆ ನಡೆಸುತ್ತಿರುವ ಪ್ರಮುಖ ಪ್ರಕರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಲಯವು ಮಂಗಳವಾರ ಮಾರ್ಚ್ 25ಕ್ಕೆ ಮುಂದೂಡಿದೆ.
ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ: ತನಿಖೆಗೆ ಸಹಕರಿಸಿದ್ದೇನೆ ಎಂದ ಸಿಸೋಡಿಯಾ, ಜಾಮೀನು ಅರ್ಜಿಯನ್ನು ವಿರೋಧಿಸಿದ ಸಿಬಿಐ
ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಫೆಬ್ರವರಿ 26ರಂದು ಸಿಸೋಡಿಯಾ ಅವರನ್ನು ಬಂಧಿಸಿತ್ತು. ಸಿಬಿಐ ತನಿಖೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮಾರ್ಚ್ 9ರಂದು ತಿಹಾರ್ ಜೈಲಿನಿಂದ ಸಿಸೋಡಿಯಾ ಅವರನ್ನು ವಶಕ್ಕೆ ಪಡೆದಿತ್ತು.