ಇಂಡಿಗೋ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಅಶಿಸ್ತಿನ ವರ್ತನೆ: ಇಬ್ಬರು ಪ್ರಯಾಣಿಕರ ಬಂಧನ
ಕುಡಿದ ಮತ್ತಿನಲ್ಲಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರನ್ನು ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ದುಬೈ- ಮುಂಬೈ ಮಾರ್ಗದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
Published: 23rd March 2023 10:06 AM | Last Updated: 23rd March 2023 02:31 PM | A+A A-

ಸಾಂದರ್ಭಿಕ ಚಿತ್ರ
ಮುಂಬೈ: ಕುಡಿದ ಮತ್ತಿನಲ್ಲಿ ಸಿಬ್ಬಂದಿ ಮತ್ತು ಸಹ ಪ್ರಯಾಣಿಕರನ್ನು ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ದುಬೈ- ಮುಂಬೈ ಮಾರ್ಗದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ವಿಮಾನ ಬುಧವಾರ ಮುಂಬೈನಲ್ಲಿ ಲ್ಯಾಂಡ್ ಆದ ಬಳಿಕ ಅವರನ್ನು ಬಂಧಿಸಲಾಯಿತು. ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಗಳು ಪಾಲ್ಘರ್ ನ ನಲಸೋಪಾರ ಮತ್ತು ಕೊಲ್ಹಾಪುರದವರು, ಗಲ್ಫ್‌ನಲ್ಲಿ ಒಂದು ವರ್ಷ ಕೆಲಸ ಮಾಡಿ ಹಿಂತಿರುಗುತ್ತಿದ್ದ ಅವರು, ಮದ್ಯ ಸೇವಿಸಿ ಸಂಭ್ರಮಾಚರಣೆ ನಡೆಸಲು ಪ್ರಾರಂಭಿಸಿದ್ದರು. ಅದಕ್ಕೆ ಆಕ್ಷೇಪಿಸಿದ ಸಹ ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿಯನ್ನು ನಿಂದಿಸಿದ್ದಾರೆ. ಬಳಿಕ ಅವರಿಂದ ಮದ್ಯವನ್ನು ಸಿಬ್ಬಂದಿ ಕಿತ್ತುಕೊಂಡಿದ್ದಾರೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಏರ್ ಇಂಡಿಯಾ ಮೂತ್ರ ವಿಸರ್ಜನೆ ಪ್ರಕರಣ: ಅಶಿಸ್ತಿನ ವರ್ತನೆಗೆ ಮಾರ್ಗಸೂಚಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 'ಸಂತ್ರಸ್ತೆ'
ಆರೋಪಿಗಳ ವಿರುದ್ಧ ಐಸಿಪಿ ಸೆಕ್ಷನ್ 336 (ಇತರರ ಜೀವ ಮತ್ತು ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಮತ್ತು ವಿಮಾನ ನಿಯಮಗಳು 21, 22 ಮತ್ತು 25 ರ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಹರ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಇದು ಈ ವರ್ಷದಲ್ಲಿ ನಡೆದ ಏಳನೇ ಘಟನೆಯಾಗಿದೆ. ಮಾರ್ಚ್ 11 ರಂದು, ಶೌಚಾಲಯದಲ್ಲಿ ಧೂಮಪಾನ ಮಾಡುತ್ತಿದ್ದ ಮತ್ತು ಲಂಡನ್-ಮುಂಬೈ ವಿಮಾನದ ತುರ್ತು ನಿರ್ಗಮನವನ್ನು ತೆರೆಯಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿತ್ತು.