ರಾಜಸ್ಥಾನ ಸೇರಿದಂತೆ ನಾಲ್ಕು ರಾಜ್ಯಗಳಿಗೆ ಬಿಜೆಪಿ ಹೊಸ ರಾಜ್ಯಾಧ್ಯಕ್ಷರ ನೇಮಕ
ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕೇಂದ್ರ ನಾಯಕತ್ವವು ಬಿಹಾರ, ರಾಜಸ್ಥಾನ, ಒಡಿಶಾ ಮತ್ತು ದೆಹಲಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನು ಗುರುವಾರ ನೇಮಕ ಮಾಡಿದೆ.
Published: 23rd March 2023 03:16 PM | Last Updated: 23rd March 2023 07:12 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಕೇಂದ್ರ ನಾಯಕತ್ವವು ಬಿಹಾರ, ರಾಜಸ್ಥಾನ, ಒಡಿಶಾ ಮತ್ತು ದೆಹಲಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ನೂತನ ರಾಜ್ಯಾಧ್ಯಕ್ಷರನ್ನು ಗುರುವಾರ ನೇಮಕ ಮಾಡಿದೆ.
ಬಿಹಾರ ಬಿಜೆಪಿ ಅಧ್ಯಕ್ಷರಾಗಿ ಸಾಮ್ರಾಟ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬಿಜೆಪಿಯಿಂದ ಬಿಹಾರ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಇವರು ಆರ್‌ಜೆಡಿ ತೊರೆದು ಬಿಜೆಪಿ ಸೇರಿದ್ದರು.
ಈ ಹಿಂದೆ 2018 ರಲ್ಲಿ ಬಿಹಾರ ಬಿಜೆಪಿ ಉಪಾಧ್ಯಕ್ಷರಾಗಿದ್ದ ಚೌಧರಿ ಅವರು ರಾಜ್ಯದ ಚುನಾವಣಾ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ಕುಶ್ವಾಹ ಸಮುದಾಯಕ್ಕೆ ಸೇರಿದ ಪ್ರಭಾವಿ ನಾಯಕ ಎಂದು ಪರಿಗಣಿಸಲ್ಪಟ್ಟಿದ್ದಾರೆ.
ಇದನ್ನು ಓದಿ: ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಮುಂದಿನ 5 ದಿನಗಳಲ್ಲಿ 2 ಬಾರಿ ರಾಜ್ಯಕ್ಕೆ ಅಮಿತ್ ಶಾ ಭೇಟಿ
ಇನ್ನು ಈ ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ಎದುಪಿಸಲಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷರಾಗಿ ಸಿಪಿ ಸಂಸದ ಜೋಶಿ ಅವರನ್ನು ನೇಮಕ ಮಾಡಲಾಗಿದೆ.
ಮಾಜಿ ರಾಜ್ಯ ಸಚಿವ ಮನಮೋಹನ್ ಸಮಾಲ್ ಅವರನ್ನು ಪಕ್ಷದ ಒಡಿಶಾ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್‌ದೇವ ಅವರನ್ನು ರಾಜ್ಯ ಘಟಕದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.