ಮಳೆಯಿಂದ ಬೆಳೆ ನಷ್ಟ: ಎಕರೆಗೆ 10,000 ರೂ. ಪರಿಹಾರ ಘೋಷಿಸಿದ ತೆಲಂಗಾಣ ಸಿಎಂ

ರಾಜ್ಯಾದ್ಯಂತ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಹಾನಿಗೀಡಾದ ಬೆಳೆಗೆ ತೆಲಂಗಾಣ ಸರ್ಕಾರ ಗುರುವಾರ ಎಕರೆಗೆ 10,000 ರೂಪಾಯಿ ಪರಿಹಾರ ಘೋಷಿಸಿದೆ.
ಕೆ ಚಂದ್ರಶೇಖರ್ ರಾವ್
ಕೆ ಚಂದ್ರಶೇಖರ್ ರಾವ್

ಹೈದರಾಬಾದ್: ರಾಜ್ಯಾದ್ಯಂತ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಹಾನಿಗೀಡಾದ ಬೆಳೆಗೆ ತೆಲಂಗಾಣ ಸರ್ಕಾರ ಗುರುವಾರ ಎಕರೆಗೆ 10,000 ರೂಪಾಯಿ ಪರಿಹಾರ ಘೋಷಿಸಿದೆ.

ಕಳೆದ ವಾರ ರಾಜ್ಯದ ಹಲವೆಡೆ ಸುರಿದ ಮಳೆ ಮತ್ತು ಆಲಿಕಲ್ಲು ಮಳೆಗೆ ಭತ್ತ, ಮಾವು, ಜೋಳ, ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ.

ಇಂದು ಖಮ್ಮಂ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು, ರಾಜ್ಯ ಸರ್ಕಾರದಿಂದ ಎಕರೆಗೆ 10,000 ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದರು.

ಕಳೆದ ವಾರ ರಾಜ್ಯಾದ್ಯಂತ ಸುರಿದ ಅಕಾಲಿಕ ಮಳೆಯಿಂದ 2,28,255 ಎಕರೆಯಲ್ಲಿ ಬೆಳೆದು ನಿಂತಿದ್ದ ಬೆಳೆ ಹಾನಿಯಾಗಿದೆ ಎಂದು ಸಿಎಂ ತಿಳಿಸಿದರು.

ರೈತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಬೆಳೆ ನಷ್ಟದ ಕುರಿತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಯಾವುದೇ ವರದಿಯನ್ನು ಕಳುಹಿಸುವುದಿಲ್ಲ. ಕಳೆದ ವರ್ಷ ರಾಜ್ಯ ಸರ್ಕಾರ ಬೆಳೆ ನಷ್ಟದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದರೂ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ರೈತರಿಗೆ ಪರಿಹಾರ ನೀಡಲು ನಿರ್ಧರಿಸಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com